ಬೆಂಗಳೂರು: ರಾಜ್ಯ ಬಜೆಟ್ನಲ್ಲಿ ರಾಜ್ಯದ ಪತ್ರಕರ್ತರಿಗೆ ಉಚಿತ ಗ್ರಾಮೀಣ ಬಸ್ ಪಾಸ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ವಿಧಾನಸೌಧದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ)ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಬೆಂಗಳೂರು ನಗರ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ನರೇಂದ್ರ ಪಾರೆಕಟ್, ಜಿಲ್ಲಾ ಘಟಕದ ಉಪಾಧ್ಯಕ್ಷ ಕೆ.ಎಂ. ಜಿಕ್ರಿಯಾ ಉಪಸ್ಥಿತರಿದ್ದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ದಾವಣಗೆರೆಯಲ್ಲಿ ಹಮ್ಮಿಕೊಂಡಿದ್ದ 38 ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿಯವರು ಕೆಯುಡಬ್ಲ್ಯೂಜೆ ಬೇಡಿಕೆಗೆ ಸ್ಪಂದಿಸಿ ಭರವಸೆ ನೀಡಿದ್ದರು.