ಬೆಂಗಳೂರು: ಹಿರಿಯ ಪತ್ರಕರ್ತ ಎಂ.ಕೆ. ಭಾಸ್ಕರ್ ರಾವ್ (75) ಅವರು ಬುಧವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಭಾಸ್ಕರ್ ರಾವ್ ಚಿಕಿತ್ಸೆ ಫಲಿಸದೇ ನಿಧನರಾದರು ಎಂದು ಕುಟುಂಬದವರು ತಿಳಿಸಿದ್ದಾರೆ. ದಿನೇಶ್ ಬಾಬು ನಿರ್ದೇಶನದ ನಟ ಉಪೇಂದ್ರ ಮುಖ್ಯ ಪಾತ್ರದಲ್ಲಿದ್ದ ‘ಹಾಲಿವುಡ್’ ಸಿನಿಮಾ ಸೇರಿದಂತೆ ಕೆಲ ಚಿತ್ರಗಳಲ್ಲಿ ಅಭಿನಯಿಸಿದ್ದ ಎಂ.ಕೆ. ಭಾಸ್ಕರ್ ರಾವ್ ರಂಗಕರ್ಮಿಯಾಗಿಯೂ ಸಕ್ರಿಯರಾಗಿದ್ದರು. ಅವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.