ಹಿರಿಯ ಪತ್ರಕರ್ತ ಮಹದೇವ್ ಪ್ರಕಾಶ್ ಕೋವಿಡ್ ಗೆ ಬಲಿ

Prasthutha|

►ಯಡಿಯೂರಪ್ಪ ಮಾಧ್ಯಮ ಸಲಹೆಗಾರರಾಗಿ ಕಾರ್ಯನಿರ್ವಹಣೆ

ಮಾರ್ಕ ಕೋವಿಡ್ ರೋಗಕ್ಕೆ ಕರ್ನಾಟಕದ ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ಅವರು ನಿಧನರಾಗಿದ್ದಾರೆ. ಅವರಿಗೆ ಕೋವಿಡ್ ಸೋಂಕು ತಗುಲಿದ್ದರಿಂದಾಗಿ ನಾರಾಯಣ ಹೃದಯಾಲಯಕ್ಕೆ ಸೇರಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ ಎನ್ನಲಾಗಿದೆ.

- Advertisement -

ಮಹದೇವ್ ಪ್ರಕಾಶ್ ಅವರು ಮುಖ್ಯಮಂತ್ರಿ  ಬಿ ಎಸ್ ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರರಾಗಿಯೂ ಕೆಲ ಕಾಲ ಕಾರ್ಯ ನಿರ್ವಹಿಸಿದ್ದರು. ಆದರೆ ಆ ಬಳಿಕ ಕಾರಣಾಂತರಗಳಿಂದ ಅದಕ್ಕೆ ರಾಜೀನಾಮೆ ನೀಡಿದ್ದರು. ಮಹದೇವ ಪ್ರಕಾಶ್ ಅವರು ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ಗುರುತಿಸಿಕೊಂಡಿದ್ದರು. ಅಂಕಣಕಾರರಾಗಿಅಂಕಣಕಾರರಾಗಿ, ರಾಜಕೀಯ ವಿಶ್ಲೇಷಕರಾಗಿ, ಬರಹಗಾರರಾಗಿ ಅವರು ಜನರಿಂದ ಗುರುತಿಸಲ್ಪಟ್ಟಿದ್ದರು.

- Advertisement -