ಪತ್ರಕರ್ತ ಎಸ್. ನಝೀರ್ ಮಸ್ಕಿಗೆ ಪತ್ರಿಕೋದ್ಯಮ ರತ್ನ ಪ್ರಶಸ್ತಿ ಪ್ರದಾನ

Prasthutha: December 6, 2021

ಬೆಂಗಳೂರು: ಯುವ ಪತ್ರಕರ್ತ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಎಸ್. ನಝೀರ್ ಮಸ್ಕಿ ಅವರಿಗೆ ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದಿಂದ ನೀಡುವ “ಪತ್ರಿಕೋದ್ಯಮ ರತ್ನ” ಪ್ರಶಸ್ತಿ ಪ್ರದಾನ ಮಾಡಲಾಯಿತು.


ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರ ಆವರಣದ ನಯನ ಸಭಾಂಗಣದಲ್ಲಿ ಭಾನುವಾರ ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಹಮ್ಮಿಕೊಂಡಿದ್ದ 2020 -22 ನೇ ಸಾಲಿನ ರಾಜ್ಯ ಪ್ರಶಸ್ತಿಗಳ ಪ್ರದಾನ ಸಮಾರಂಭದಲ್ಲಿ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು.


ಕಾರ್ಯಕ್ರಮದ ಆರಂಭದಲ್ಲಿ ಹಿರಿಯ ಕಲಾವಿದ ನಿರ್ದೇಶಕ ನಟ ಕೆ. ಶಿವರಾಂ ಅವರ ನಿಧನಕ್ಕೆ ಮತ್ತು ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಅವರಿಗೆ ಮೌನಾಚರಣೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.


ಇದೇ ವೇಳೆ ನಜೀರ್ ಮಸ್ಕಿ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ರಾಯಚೂರು ಜಿಲ್ಲೆ ಸಂಯುಕ್ತಾಶ್ರಯದಲ್ಲಿ ಬಹುರೂಪಿ ಚೌಡಯ್ಯ ಹಗಲುವೇಷ ಕಲಾವಿದರ ಟ್ರಸ್ಟ್ ನಿಂದ ಬಹುರೂಪಿ ಸಿರಿ ಪ್ರಶಸ್ತಿ ಮತ್ತು ಕರ್ನಾಟಕ ಮುಸ್ಲಿಂ ಅಲ್ಪಸಂಖ್ಯಾತರ ಹಕ್ಕು ಹೋರಾಟ ಸಮಿತಿ ವತಿಯಿಂದ ಸಮಾಜಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯ ಡಾ.ಎಲ್. ಹನುಮಂತಯ್ಯ, ಡಾ.ಶಿವಕುಮಾರ್ ಸ್ವಾಮೀಜಿ, ಪ್ರಕಾಶ್ ಯೋಗಿ ಗೂರೂಜಿ, ಶಾಸಕ ಅರವಿಂದ ಲಿಂಬಾವಳಿ, ಡಾ.ಲಕ್ಷಣಸಿಂಗ್, ಎಂ.ಟಿಪುವರ್ಧನ್, ಎಸ್.ಮಾರಪ್ಪ, ರವೀಶ್ಕುಮಾರ್, ಡಾ. ಲಯನ್ ವೆಂಕಟೇಶ್, ಚಂದ್ರಮೌಳಿ.ಎಸ್.ನಾಯ್ಡರ್, ಡಾ.ಚಿಕ್ಕಹೆಜ್ಜಾಜಿ ಮಹದೇವ್ ರಮೇಶ್ ಸುರ್ವೆ ಬಂಗ್ಲೆ ಮಲ್ಲಕಾರ್ಜುನ್ ಮತ್ತಿತರರು ಪಾಲ್ಗೊಂಡಿದ್ದರು

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!