ಪತ್ರಕರ್ತ ಶಂಶೀರ್ ಬುಡೋಳಿಗೆ ‘ಕಾವ್ಯ ಸಿರಿ ಪ್ರಶಸ್ತಿ’ ಪ್ರದಾನ

Prasthutha|

ಮಂಗಳೂರು : ಪತ್ರಕರ್ತ ಶಂಶೀರ್ ಬುಡೋಳಿ ಅವರಿಗೆ ಕರ್ನಾಟಕ ರಾಜ್ಯ ಭಾವೈಕ್ಯತಾ ಪರಿಷತ್ ವತಿಯಿಂದ ‘ಕಾವ್ಯ ಸಿರಿ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಮಂಗಳೂರು ನಗರದ ಜೆಪ್ಪು ಸೈಂಟ್ ಜೋಸೆಫ್ ಚರ್ಚ್ ನ ಮರಿಯಾ ಜಯಂತಿ ಸಭಾಂಗಣದಲ್ಲಿ ರವಿವಾರ ನಡೆದ ಭಾವೈಕ್ಯ ಸಮ್ಮಿಲನ, ಕವಿಗೋಷ್ಟಿ, ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

- Advertisement -

ಶಂಶೀರ್ ಬುಡೋಳಿ ಅವರು ಸಾಹಿತ್ಯ, ಮಾಧ್ಯಮ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇತ್ತೀಚಿಗೆ ಮೂಲ್ಕಿಯ ಪುನರೂರಲ್ಲಿ ನಡೆದ 13 ನೇ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನದಲ್ಲಿ ಇವರು  ‘ಕರ್ನಾಟಕ ಯುವ ರತ್ನ’ ಪ್ರಶಸ್ತಿಯನ್ನು ಪಡೆದಿದ್ದರು.

- Advertisement -

ಇವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬುಡೋಳಿ ನಿವಾಸಿ ಇಬ್ರಾಹಿಂ ಫಾಝಿಲ್ ಹನೀಫಿ ಹಾಗೂ ಕೈರುನ್ನೀಸಾ ದಂಪತಿಯ ಪುತ್ರರಾಗಿದ್ದಾರೆ.

Join Whatsapp