Home ಟಾಪ್ ಸುದ್ದಿಗಳು ರಾಷ್ಟ್ರಪತಿಯ ಮೈಬಣ್ಣದ ಅವಹೇಳನ: ಪತ್ರಕರ್ತ ವಿಶ್ವೇಶ್ವರ ಭಟ್ ಗೆ ಸಮನ್ಸ್

ರಾಷ್ಟ್ರಪತಿಯ ಮೈಬಣ್ಣದ ಅವಹೇಳನ: ಪತ್ರಕರ್ತ ವಿಶ್ವೇಶ್ವರ ಭಟ್ ಗೆ ಸಮನ್ಸ್

ನವದೆಹಲಿ: ದೇಶದ ಘನತವೆತ್ತ ರಾಷ್ಟ್ರಪತಿ ದ್ರೌಪದಿ ಮುರ್ಮುರವರ ಮೈಬಣ್ಣದ ಬಗ್ಗೆ ಅವಹೇಳನಕಾರಿಯಾಗಿ ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗ ವಿಶ್ವವಾಣಿ ಪತ್ರಿಕೆಯ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಗೆ ಸಮನ್ಸ್ ನೀಡಿದೆ.


ವಿಶ್ವವಾಣಿ ಪತ್ರಿಕೆಯ ಅಕ್ಟೋಬರ್ 06ರ ನೂರೆಂಟು ವಿಶ್ವ ಎಂಬ ಅಂಕಣದ ‘ನದಿಯ ಹೆಸರಿಟ್ಟುಕೊಂಡು ನೀರಿಗಾಗಿ ನರಳುವ ಜೋರ್ಡಾನ್!’ ಎಂಬ ಬರಹದಲ್ಲಿ “ಸುಟ್ಟು ಕರಕಲಾದ ಕಾಗೆ! ಥೇಟು ‘ಮುರ್ಮು’ ಅವತಾರ!” ಎಂದು ಬರೆಯುವ ಮೂಲಕ ರಾಷ್ಟ್ರಪತಿಯವರ ಮೈಬಣ್ಣವನ್ನು ಅವಹೇಳನ ಮಾಡಿದ್ದರು. ಅಷ್ಟೇ ಅಲ್ಲ, ನಂತರ ಅವರು ತಮ್ಮ ಮಾತನ್ನು ಸಮರ್ಥಿಸಿ ಉದ್ದಟತನ ತೋರಿಸಿದ್ದರು.


ಗೌರವಾನ್ವಿತ ರಾಷ್ಟ್ರಪತಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಅನ್ನು ಗುರುತಿಸಿದ್ದೇವೆ. ಆಯೋಗವು ಅಕ್ಟೋಬರ್ 26ರಂದು ಮಧ್ಯಾಹ್ನ 12.30 ಕ್ಕೆ ವಿಚಾರಣೆಗೆ ಹಾಜರಾಗುವಂತೆ ಪತ್ರಕರ್ತ ವಿಶ್ವೇಶ್ವರ ಭಟ್ ಅವರಿಗೆ ನೋಟಿಸ್ ಕಳುಹಿಸಿದ್ದೇವೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ ಟ್ವೀಟ್ ಮಾಡಿದೆ.

Join Whatsapp
Exit mobile version