ಪ್ರಧಾನಿ ಮೋದಿ ಮುಂದೆಯೇ ರಾಷ್ಟ್ರ ಧ್ವಜದ ಮೇಲೆ ಬಿಜೆಪಿ ಧ್ವಜ ಹೊದಿಸಿದ ನಾಯಕರು | ವ್ಯಾಪಕ ಆಕ್ರೋಶ

Prasthutha|

ಲಕ್ನೋ : ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ರವರು‌ ನಿಧನ ಹೊಂದಿದ್ದು, ಈ ಹಿನ್ನೆಲೆಯಲ್ಲಿ ಅವರ ಪ್ರಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸುವ ವೇಳೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲಿಯೇ ಕಲ್ಯಾಣ್‌ ಸಿಂಗ್‌ ಪಾರ್ಥಿವ ಶರೀರದ ಮೇಲೆ ಇದ್ದ ಭಾರತದ ತ್ರಿವರ್ಣ ಧ್ವಜದ ಮೇಲೆ ಬಿಜೆಪಿ ಪಕ್ಷದ ಧ್ವಜವನ್ನು ಹೊದಿಸಲಾಗಿದ್ದು, ಇದು ಭಾರತದ ತ್ರಿವರ್ಣ ಧ್ವಜಕ್ಕೆ ಮಾಡಿದ ಅಪಮಾನವಾಗಿದೆ ಎಂದು ಸಾಮಾಜಿಕ ತಾಣದಲ್ಲಿ ಬಳಕೆದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿರುವ ಚಿತ್ರದ ಪ್ರಕಾರ, ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲೇ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ತ್ರಿವರ್ಣ ಧ್ವಜದ ಮೇಲೆ ಬಿಜೆಪಿ ಧ್ವಜ ಹೊದಿಸುತ್ತಿರುವುದು ಕಂಡು ಬಂದಿದೆ.ಇದು ರಾಷ್ಟ್ರಧ್ವಜಕ್ಕೆ ಮಾಡಿದ ಅಪಮಾನ ಹಾಗೂ ಬಿಜೆಪಿಗರಿಗೆ ರಾಷ್ಟ್ರ ಧ್ವಜ, ರಾಷ್ಟ್ರದ ಮೇಲಿನ ಪ್ರೀತಿ ಯಾವ ಮಟ್ಟದಲ್ಲಿದೆಯೆಂದು ತೋರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -