ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಜೆಪಿ ನಡ್ಡಾ ರಾಜೀನಾಮೆ

Prasthutha|

ನವದೆಹಲಿ: ಮಹತ್ವದ ಬೆಳವಣಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

- Advertisement -

ಮೋದಿ 3ನೇ ಅವಧಿಯ ಸರ್ಕಾರದಲ್ಲಿ ಜೆಪಿ ನಡ್ಡಾಗೆ ಕೇಂದ್ರ ಸಚಿವ ಸ್ಥಾನ ನೀಡಲಾಗುತ್ತಿದೆ. ಇದರ ಹಿನ್ನೆಲೆಯಲ್ಲಿ ಜೆಪಿ ನಡ್ಡಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಜೆಪಿ ನಡ್ಡಾ 2014 ಮೋದಿ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿದ್ದರು. 2019 ಜೂನ್ 19 ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಯಶಸ್ಸು ತಂದುಕೊಟ್ಟಿರುವ ಜೆಪಿ ನಡ್ಡಾಗೆ ಮಂತ್ರಿಗಿರಿ ನೀಡಲು ಬಿಜೆಪಿ ಮುಂದಾಗಿದೆ. ಅವರ ರಾಜೀನಾಮೆಯಿಂದ ಇದೀಗ ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷ ಯಾರು ಎಂಬ ಕುತೂಹಲ ಮೂಡಿದೆ.

Join Whatsapp
Exit mobile version