Home ಕರಾವಳಿ ಕರಾವಳಿ ಜಿಲ್ಲೆಗಳಲ್ಲಿ ಜು. 25ರ ವರೆಗೆ ವ್ಯಾಪಕ ಮಳೆ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಜು. 25ರ ವರೆಗೆ ವ್ಯಾಪಕ ಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ ಮುಂದಿನ 5 ದಿನಗಳವರೆಗೆ ಮಳೆಯ ತೀವ್ರತೆ ಕಡಿಮೆಯಾಗುವ ಸಾಧ್ಯತೆಗಳಿದ್ದರೂ, ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಜು. 25ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಜುಲೈ 23ರ ವರೆಗೆ ಹಳದಿ ಅಲರ್ಟ್‌ ಘೋಷಿಸಲಾಗಿದೆ. ಈ ಮೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆ ಮತ್ತು ನಿರಂತರ ಗಾಳಿಯ ವೇಗ 30-40 ಕಿಮೀ ತಲುಪುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.

ಬೆಳಗಾವಿ, ಬೀದರ್‌, ಕಲಬುರಗಿ ಯಾದಗಿರಿ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ಕೆಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆಗತಳಿವೆ. ಬೆಂಗಳೂರಿನಲ್ಲಿ ಜುಲೈ 25ರ ವರೆಗೆ ಅಲ್ಲಲ್ಲಿ ಹಗುರದಿಂದ ಮಳೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ನಿರ್ದೇಶಕ ಸಿ.ಎಸ್‌.ಪಾಟೀಲ್‌ ತಿಳಿಸಿದ್ದಾರೆ.

Join Whatsapp
Exit mobile version