ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿ ಪೊಲೀಸರ ಬಲೆಗೆ ಬಿದ್ದಿರುವ ನಟ ದರ್ಶನ್, ನಟಿ ಪವಿತ್ರಾ ಗೌಡ ಮುಂತಾದವರಿಗೆ ಸಂಕಷ್ಟ ಹೆಚ್ಚಾಗಿದೆ.
ಇಂದು (ಜುಲೈ 4) ನ್ಯಾಯಾಂಗ ಬಂಧನದ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಡ್ಜ್ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸುವಂತೆ ಎಸ್ ಪಿಪಿ ರಿಮ್ಯಾಂಡ್ ಅರ್ಜಿ ಸಲ್ಲಿಕೆ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲಾಯಿತು. ಆರ್ಥಿಕ ಅಪರಾಧಗಳ ಕೋರ್ಟ್ ಗೆ ರಿಮ್ಯಾಂಡ್ ಅರ್ಜಿ ಸಲ್ಲಿಕೆ ಆಗಿದೆ.
ಜುಲೈ 18ರವರೆಗೆ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶ ನೀಡಿದೆ.