Home ಟಾಪ್ ಸುದ್ದಿಗಳು ಅನ್ನಭಾಗ್ಯ: ಜುಲೈ 10ರಿಂದ ಅಕ್ಕಿ ಬದಲು ಹಣ ಕೊಡುವ ಪ್ರಕ್ರಿಯೆ ಪ್ರಾರಂಭ: ಮುಖ್ಯಮಂತ್ರಿ ಸಿದ್ದರಾಮಯ್ಯ

ಅನ್ನಭಾಗ್ಯ: ಜುಲೈ 10ರಿಂದ ಅಕ್ಕಿ ಬದಲು ಹಣ ಕೊಡುವ ಪ್ರಕ್ರಿಯೆ ಪ್ರಾರಂಭ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಅನ್ನಭಾಗ್ಯ ಯೋಜನೆಯ ಹಣ ಜುಲೈ 1ರಂದೇ ಕೊಡ್ತೀವಿ ಅಂತಾ ಹೇಳಿಲ್ಲ. ಈ ತಿಂಗಳು 10ರ ನಂತರ ಕೊಡಲು ಪ್ರಾರಂಭ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ತಮ್ಮ ಸರ್ಕಾರಿ ನಿವಾಸದ ಬಳಿ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿ, ಜುಲೈ ತಿಂಗಳ ಅಕ್ಕಿ ಬದಲಿಗೆ ದುಡ್ಡನ್ನು ಜುಲೈ 1ರಂದೇ ಕೊಡುತ್ತೇವೆ ಎಂದು ಹೇಳಿಲ್ಲ. ಈ ತಿಂಗಳ ಹಣವನ್ನು ಈ ತಿಂಗಳಲ್ಲಿಯೇ ನೀಡಲಾಗುವುದು. ಜುಲೈ 10ರ ನಂತರ ಹಣ ಹಾಕುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.

Join Whatsapp
Exit mobile version