ಮಂಗಳೂರು: ಕರಾವಳಿಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ದ.ಕ ಜಿಲ್ಲಾದ್ಯಂತ ನಾಳೆ (ಜು.20) ಶಾಲಾ- ಪಿಯು ಕಾಲೇಜಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.
ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು (12ನೇ ತರಗತಿವರೆಗೆ)/ ಪಿಯು ಕಾಲೇಜುಗಳಿಗೆ ಜಿಲ್ಲಾಡಳಿತವು ರಜೆ ಘೋಷಣೆ ಮಾಡಿದೆ.