ಜು. 14ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ: ಲಕ್ಷ್ಮೀ ಹೆಬ್ಬಾಳ್ಕರ್

Prasthutha|

ಬೆಳಗಾವಿ: ಮನೆಯ ಯಜಮಾನಿಗೆ 2000 ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವ ಪಕ್ರಿಯೆಯನ್ನು ಜುಲೈ 14ರಿಂದ ಆರಂಭಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿದ್ದಾರೆ.

- Advertisement -

ಬೆಳಗಾವಿಯಲ್ಲಿ ಮಾತನಾಡಿದ ಅವರು, ಜುಲೈ 3 ಅಥವಾ 4ರಂದು ಈ ಬಗ್ಗೆ ನಾವು ಘೋಷಣೆ ಮಾಡುತ್ತೇವೆ. ಆಗಸ್ಟ್ ತಿಂಗಳಿಂದ ಮನೆ ಯಜಮಾನಿ ಖಾತೆಗೆ 2 ಸಾವಿರ ರೂ. ಹಾಕುತ್ತೇವೆ. ರಾಜ್ಯದ ಜನರ ನಿರೀಕ್ಷೆಗೆ ತಕ್ಕ ಹಾಗೆ ಕೆಲಸ ಮಾಡುತ್ತೇವೆ ಎಂದು ಹೇಳಿದರು.



Join Whatsapp