ಜೂನ್ ಮೊದಲ ವಾರದಲ್ಲಿ ಏಕನಾಥ ಶಿಂಧೆ ಸರಕಾರ ಪತನ: ಎಂ.ಬಿ.ಪಾಟೀಲ್

Prasthutha|

- Advertisement -

ಬೆಂಗಳೂರು: ಲೋಕಸಭಾ ಚುನಾವಣೆ ನಂತರ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ 20 ಶಾಸಕರು ಕಾಂಗ್ರೆಸ್ಸನ್ನು ಸೇರಲಿದ್ದು, ಅವರೆಲ್ಲರೂ ನಮ್ಮ ಸಂಪರ್ಕದಲ್ಲಿ ಇದ್ದಾರೆ. ಸರಕಾರ ಬೀಳಿಸಲು ಇದು ಮಹಾರಾಷ್ಟ್ರವಲ್ಲ. ಜೂನ್ ಮೊದಲ ವಾರದ ನಂತರ ಶಿಂದೆ ಅವರ ಸರಕಾರವೇ ಪತನವಾಗಿ, ಅವರೇ ಮಾಜಿ ಆಗಲಿದ್ದಾರೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಭವಿಷ್ಯ ನುಡಿದರು.

ಲೋಕಸಭೆ ಚುನಾವಣೆಯ ಬಳಿಕ ಕರ್ನಾಟಕ ಸರಕಾರ ಉರುಳಿ ಬೀಳಲಿದೆ ಎನ್ನುತ್ತಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂದೆ ಮೊದಲು ಸಂವಿಧಾನ ಮತ್ತು ಪಕ್ಷಾಂತರ ನಿಷೇಧ ಕಾಯ್ದೆಯನ್ನು ಅರ್ಥ ಮಾಡಿಕೊಳ್ಳಲಿ ಎಂದು ಹೇಳಿದ್ದಾರೆ.

- Advertisement -

ರಾಜ್ಯದಲ್ಲಿ ನಾವು 136 ಶಾಸಕರಿದ್ದೇವೆ. ಪಕ್ಷಾಂತರ ನಿಷೇಧ ಕಾಯ್ದೆಯಿಂದ ಪಾರಾಗಲು ನಮ್ಮ 89 ಶಾಸಕರು ಬಿಜೆಪಿಗೆ ಹೋಗಬೇಕು. ಈಗ ಬೇರೆ ಪಕ್ಷಕ್ಕೆ ಹೋಗುವ ದಡ್ಡರು ಯಾರೂ ಇಲ್ಲ ಎಂದು ತಿಳಿಸಿದರು.



Join Whatsapp