ಜೂ. 27 ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Prasthutha|

ಮೈಸೂರು: ಜೂನ್ 27ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

- Advertisement -


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಗೃಹಲಕ್ಷ್ಮೀ ಯೋಜನೆ ಜಾರಿ ತಡವಾಗುತ್ತಿಲ್ಲ. ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಆ್ಯಪ್ ತಯಾರಾಗಿದೆ. ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸುತ್ತೇವೆ. ಜೂ.27ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುತ್ತದೆ. ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಹಣ ಪಾವತಿಸಬಾರದು. ಆಗಸ್ಟ್ 16 ಅಥವಾ 17ರಂದು ಮನೆ ಯಜಮಾನಿ ಖಾತೆಗೆ ಹಣ ತಲುಪುತ್ತದೆ. ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

Join Whatsapp
Exit mobile version