ನವದೆಹಲಿ: ಸುಪ್ರೀಂ ಕೋರ್ಟ್ ನ ಎರಡನೇ ಹಿರಿಯ ನ್ಯಾಯಾಧೀಶ ಉದಯ್ ಉಮೇಶ್ ಲಲಿತ್ ಅವರನ್ನು ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲು ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಶಿಫಾರಸು ಮಾಡಿದ್ದಾರೆ.
ಸಿಜೆಐ ರಮಣ ಅವರು ಆಗಸ್ಟ್ 26ರಂದು ನಿವೃತ್ತರಾಗಲಿದ್ದು, ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ಸಚಿವ ಕಿರಣ್ ರಿಜಿಜು ಅವರು ಸಿಜೆಐಗೆ ಪತ್ರ ಬರೆದು ಉತ್ತರಾಧಿಕಾರಿಯನ್ನು ಹೆಸರಿಸುವಂತೆ ಇತ್ತೀಚೆಗೆ ಮನವಿ ಮಾಡಿದ್ದರು.
1971ರ ಜನವರಿಯಲ್ಲಿ 13ನೇ ಸಿಜೆಐ ಆಗಿ ನೇಮಕಗೊಂಡ ನ್ಯಾಯಮೂರ್ತಿ ಎಸ್.ಎಂ.ಸಿಕ್ರಿ ಅವರ ನಂತರ ನ್ಯಾಯಮೂರ್ತಿ ಲಲಿತ್ ಅವರು ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ನೇರವಾಗಿ ಸುಪ್ರೀಂ ಕೋರ್ಟ್ ಪೀಠಕ್ಕೆ ಬಡ್ತಿ ಪಡೆದ ಎರಡನೇ ಸಿಜೆಐ ಆಗಲಿದ್ದಾರೆ.