Home ಟಾಪ್ ಸುದ್ದಿಗಳು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಪಿ.ಬಿ.ವರಾಳೆ ನೇಮಕ

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಪಿ.ಬಿ.ವರಾಳೆ ನೇಮಕ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಪಿ.ಬಿ.ವರಾಳೆ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜುಜು ತಿಳಿಸಿದ್ದಾರೆ.

ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದ ಪಿ.ಬಿ.ವರಾಳೆ (ಪ್ರಸನ್ನ ಬಿ.ವರಾಳೆ) ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ನ್ಯಾಯಮೂರ್ತಿ ಎ.ಎಂ.ಮಾರ್ಗೇ ಅವರಿಗೆ ಅದೇ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಬಡ್ತಿ ನೀಡಲಾಗಿದೆ.

ಈ ಕುರಿತು ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಕೇಂದ್ರ ಕೇಂದ್ರ ಕಾನೂನು ಸಚಿವ ಕಿರಣ್ ರಿಜುಜು ಅವರು, ಸಾಂವಿಧಾನಿಕ ನಿಬಂಧನೆಗಳ ಅನುಸಾರ ನ್ಯಾ.ಪಂಕಜ್ ಮಿತ್ತಲ್ ಅವರನ್ನು ರಾಜಸ್ಥಾನ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ವರ್ಗಾವಣೆ ಮಾಡಲಾಗಿದೆ. ನ್ಯಾ. ಪಿ.ಬಿ. ವರಾಳೆ ಅವರನ್ನು ಕರ್ನಾಟಕ ಹೈಕೋರ್ಟ್ ಮತ್ತು ನ್ಯಾ.ಎ.ಎಂ. ಮಾರ್ಗೇ ಅವರನ್ನು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್ ಕೊಲಿಜಿಯಂ ಕಳೆದ ತಿಂಗಳ ಕೊನೆಯಲ್ಲಿ ಶಿಫಾರಸುಗಳನ್ನು ಮಾಡಿತ್ತು.

Join Whatsapp
Exit mobile version