ನಿವೃತ್ತ ನ್ಯಾಯಮೂರ್ತಿ ಎಂ. ರಾಮಾ ಜೋಯಿಸ್ ನಿಧನ

Prasthutha|

ಬೆಂಗಳೂರು : ಆರೆಸ್ಸೆಸ್ ಸ್ವಯಂ ಸೇವಕರು, ನಿವೃತ್ತ ನ್ಯಾಯಮೂರ್ತಿ, ಮಾಜಿ ರಾಜ್ಯಪಾಲ ರಾಮಾ ಜೋಯಿಸ್ (89) ಇಂದು ಮುಂಜಾನೆ ನಿಧನರಾಗಿದ್ದಾರೆ.

- Advertisement -

1931ರ ಜು.27ರಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆಯಲ್ಲಿ ಜನಿಸಿದ ರಾಮಾ ಜೋಯಿಸ್, ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು.

ಜಾರ್ಖಂಡ್ ಮತ್ತು ಬಿಹಾರ ರಾಜ್ಯಗಳ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ, ಕರ್ನಾಟಕದಿಂದ ರಾಜ್ಯಸಭೆಯ ಸದಸ್ಯರೂ ಆಗಿದ್ದರು. ರಾಮಾ ಜೋಯಿಸ್ ನಿಧನಕ್ಕೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

Join Whatsapp