ನ್ಯಾಯಮೂರ್ತಿಗಳನ್ನೇ ಕೇಂದ್ರ ಸರ್ಕಾರ ಬೆದರಿಸುತ್ತಿದೆ: ಪ್ರಶಾಂತ್ ಭೂಷಣ್

Prasthutha|

ನ್ಯಾಯಮೂರ್ತಿಗಳನ್ನೇ ಕೇಂದ್ರ ಸರ್ಕಾರ ಬೆದರಿಸುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ, ಹೋರಾಟಗಾರ ಪ್ರಶಾಂತ್ ಭೂಷಣ್ ಆರೋಪಿಸಿದ್ದಾರೆ.

- Advertisement -

ಬೆಂಗಳೂರಿನಲ್ಲಿ ‘ಫೋರಂ ಫಾರ್ ಡೆಮಾಕ್ರಸಿ ಆ್ಯಂಡ್‌ ಕಮ್ಯುನಲ್‌ ಅಮಿಟಿ’ (ಎಫ್‌ಡಿಸಿಎ) ಆಯೋಜಿಸಿದ್ದ ‘ಲೋಕಸಭಾ ಚುನಾವಣೆಯ ನಂತರ ಮುಂದೇನು?’ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳನ್ನೂ ಬಿಡದೆ ಎಲ್ಲ ನ್ಯಾಯಮೂರ್ತಿಗಳ ಹಿಂದೆ ಕೇಂದ್ರ ಸರ್ಕಾರ ಗೂಢಚಾರಿಗಳನ್ನು ಬಿಟ್ಟಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಲು ಸಾಧ್ಯವಾಗದಿರುವುದರಿಂದ ಇದೀಗ ನ್ಯಾಯಾಂ ತನ್ನ ನಿಲುವಿಗೆ ಗಟ್ಟಿಯಾಗಿ ನಿಲ್ಲಲು ಆರಂಭಿಸಿದೆ ಎಂದು ಹೇಳಿದ್ದಾರೆ.

ಬಿಜೆಪಿ ಸರ್ಕಾರವು ತನ್ನ ಹತ್ತು ವರ್ಷಗಳ ಆಡಳಿತದಲ್ಲಿ ಎಲ್ಲ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಹಸ್ತಕ್ಷೇಪ ಮಾಡಿ ಅವುಗಳನ್ನು ದುರ್ಬಲಗೊಳಿಸಿದೆ. ಈ ಬಾರಿ ಬಿಜೆಪಿ ಮೈತ್ರಿಪಕ್ಷಗಳ ಅಡಿಯಲ್ಲಿ ಸರ್ಕಾರ ರಚಿಸಿದೆ. ವಿಪಕ್ಷಗಳಿಗೆ ಬಲ ಬಂದ ಈ ಸಮಯದಲ್ಲಿ ಅವುಗಳು ಸಾಂವಿಧಾನಿಕ ಸಂಸ್ಥೆಗಳನ್ನು ಬಲಪಡಿಸುವ ಕೆಲಸ ಮಾಡಬೇಕಿದೆ ಎಂದು ಪ್ರಶಾಂತ್ ಭೂಷಣ್ ಹೇಳಿದ್ದಾರೆ.



Join Whatsapp
Exit mobile version