ಕೊಚ್ಚಿ: ಸಹೋದರನಿಂದ ಗರ್ಭಿಣಿಯಾಗಿದ್ದ ಅಪ್ರಾಪ್ತ ಬಾಲಕಿಯ ಗರ್ಭಪಾತಕ್ಕೆ ಕೇರಳ ಹೈಕೋರ್ಟ್ ಅನುಮತಿ ನೀಡಿದೆ.
ತನ್ನ ಅಪ್ರಾಪ್ತ ವಯಸ್ಸಿನ ಮಗಳ ಹೊಟ್ಟೆಯಲ್ಲಿರುವ ಏಳು ತಿಂಗಳ ಭ್ರೂಣವನ್ನು ಗರ್ಭಪಾತ ಮಾಡಲು ಅನುಮತಿ ನೀಡುವಂತೆ ಕೋರಿ ಬಾಲಕಿಯ ತಂದೆ ಹೈಕೋರ್ಟ್ ಮೆಟ್ಟಿಲೇರಿದ್ದರು.
ಗರ್ಭಪಾತಕ್ಕೆ ಅವಕಾಶ ನೀಡದಿದ್ದರೆ ಸಾಮಾಜಿಕ ಮತ್ತು ಮಾನಸಿಕ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ ಎಂದು ನ್ಯಾಯಮೂರ್ತಿ ಜಿಯಾದ್ ರೆಹಮಾನ್ ಅವರು ಗರ್ಭಪಾತಕ್ಕೆ ಆದೇಶ ನೀಡಿದ್ದಾರೆ.
ತನ್ನ ಸಹೋದರನಿಂದಲೇ ಗರ್ಭ ಧರಿಸಿರುವುದರಿಂದಾಗಿ ಸಂತ್ರಸ್ತ ಬಾಲಕಿಯ ಸಾಮಾಜಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಬಾಲಕಿಯನ್ನು ಪರೀಕ್ಷಿಸಲು ರಚಿಸಲಾದ ವೈದ್ಯಕೀಯ ಮಂಡಳಿಯು ಹೈಕೋರ್ಟಿಗೆ ವರದಿ ಸಲ್ಲಿಸಿತ್ತು.