ದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕೆ.ಕವಿತಾರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮೇ 20ರವರೆಗೆ ವಿಸ್ತರಿಸಿದೆ.
ದೆಹಲಿ ಮದ್ಯದ ಅಬಕಾರಿ ನೀತಿ 2021-22ಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಆರನೇ ಪೂರಕ ಆರೋಪಪಟ್ಟಿಯನ್ನು ಪರಿಗಣಿಸಿ ವಾದಗಳನ್ನು ಆಲಿಸುವುದನ್ನು ರೂಸ್ ಅವೆನ್ಯೂ ನ್ಯಾಯಾಲಯವು ಮೇ 20ಕ್ಕೆ ಮುಂದೂಡಿದೆ.
ಸಿಬಿಐ ಮತ್ತು ಇ.ಡಿ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ತೆಲಂಗಾಣ ಎಂಎಲ್ ಸಿಯ ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಅವರ ಕಸ್ಟಡಿಯನ್ನು ವಿಸ್ತರಿಸಿ ಈ ಹಿಂದೆ ಆದೇಶಿಸಲಾಗಿತ್ತು.