Home ಟಾಪ್ ಸುದ್ದಿಗಳು ಕರ್ತವ್ಯಲೋಪ ಆರೋಪ: ಕೆ.ಆರ್.ಪುರ ಪೊಲೀಸ್ ಠಾಣೆ ಇನ್‌ ಸ್ಪೆಕ್ಟರ್ ನಂದೀಶ್ ಅಮಾನತು

ಕರ್ತವ್ಯಲೋಪ ಆರೋಪ: ಕೆ.ಆರ್.ಪುರ ಪೊಲೀಸ್ ಠಾಣೆ ಇನ್‌ ಸ್ಪೆಕ್ಟರ್ ನಂದೀಶ್ ಅಮಾನತು

ಬೆಂಗಳೂರು: ತಡರಾತ್ರಿಯವರೆಗೂ ತೆರೆದಿದ್ದ ಬಾರ್ ಆ್ಯಂಡ್ ರೆಸ್ಟೋರೆಂಟ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳದೇ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆ.ಆರ್. ಪುರ ಇನ್ಸ್ಪೆಕ್ಟರ್ ಎಚ್.ಎಲ್. ನಂದೀಶ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ರಾತ್ರಿ 1 ಗಂಟೆಯವರೆಗೆ ವಹಿವಾಟು ನಡೆಸಲು ಅವಕಾಶವಿದೆ. ಆದರೆ, ಟಾನಿಕ್ ಬಾರ್ ಆ್ಯಂಡ್ ರೆಸ್ಟೋರೆಂಟ್ ನಿತ್ಯವೂ ತಡರಾತ್ರಿಯವರೆಗೂ ವಹಿವಾಟು ನಡೆಸುತ್ತಿತ್ತು. ಇದು ಗೊತ್ತಿದ್ದರೂ ನಂದೀಶ್ ಕ್ರಮ ಕೈಗೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಇನ್ಸ್ಪೆಕ್ಟರ್ ಎಚ್.ಎಲ್. ನಂದೀಶ್ ಅವರನ್ನು ಅಮಾನತು ಮಾಡಲಾಗಿದೆ.

Join Whatsapp
Exit mobile version