ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ: ಕೆ.ಆರ್‌ ಪುರಂ ತಹಶೀಲ್ದಾರ್‌ ಅಜಿತ್‌ ರೈ ಅಮಾನತು

Prasthutha|

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ಲೋಕಾಯುಕ್ತ ಪೊಲೀಸರ ವಶದಲ್ಲಿರುವ ಕೆ.ಆರ್‌. ಪುರಂ ತಹಶೀಲ್ದಾರ್‌ ಅಜಿತ್‌ ರೈ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

- Advertisement -

ಅನುಕಂಪದ ಆಧಾರದಲ್ಲಿ ಕಂದಾಯ ಇಲಾಖೆಯಲ್ಲಿ ಕೆಲಸ ಪಡೆದುಕೊಂಡಿದ್ದ ಅಜಿತ್‌ ರೈ ನಂತರ ಹಲವು ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಬಡ್ತಿ ಪಡೆದಿದ್ದರು. ಪ್ರಸ್ತುತ ಕೆ.ಆರ್‌. ಪುರಂನಲ್ಲಿ ತಹಶೀಲ್ದಾರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಆದಾಯಕ್ಕಿಂತ 69% ಹೆಚ್ಚುವರಿ ಆಸ್ತಿ ಹೊಂದಿರುವ ಆರೋಪದಲ್ಲಿ ಅಜಿತ್ ರೈ ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Join Whatsapp