Home ಟಾಪ್ ಸುದ್ದಿಗಳು ಕೆ-ರೈಲು ಯೋಜನೆ: ಭೂ ಸಮೀಕ್ಷೆ ತಡೆಹಿಡಿಯಲು ಸುಪ್ರೀಂ ಕೋರ್ಟ್ ನಕಾರ

ಕೆ-ರೈಲು ಯೋಜನೆ: ಭೂ ಸಮೀಕ್ಷೆ ತಡೆಹಿಡಿಯಲು ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ಸಿಲ್ವರ್ ಲೈನ್ ಸೆಮಿ ಹೈಸ್ಪೀಡ್ ರೈಲು ಕಾರಿಡಾರ್ ನ ಸಾಮಾಜಿಕ ಪರಿಣಾಮ ಮೌಲ್ಯಮಾಪನ ಸಮೀಕ್ಷೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಈ ವಿಚಾರದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಅದು ಹೇಳಿದೆ.

ರಾಜ್ಯ ಸರ್ಕಾರಕ್ಕೆ ಸಮೀಕ್ಷೆ ನಡೆಸಲು ಅವಕಾಶ ನೀಡಿದ ಕೇರಳ ಹೈಕೋರ್ಟ್ ಆದೇಶದ ವಿರುದ್ಧ ಆಲುವಾ ಮೂಲದವರೊಬ್ಬರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿಗಳಾದ ಎಂ ಆರ್ ಷಾ ಮತ್ತು ಬಿ ವಿ ನಾಗರತ್ನ ಅವರ ಪೀಠವು ಸಮೀಕ್ಷೆಗೆ ಅನುಮತಿ ನೀಡಿದ ಕೇರಳ ಹೈಕೋರ್ಟ್ ವಿಭಾಗೀಯ ಪೀಠದ ಆದೇಶದ ವಿರುದ್ಧ ಸಲ್ಲಿಸಲಾದ ಮೇಲ್ಮನವಿಯನ್ನು ವಜಾಗೊಳಿಸಿದೆ.

1961 ರ ಕೇರಳ ಸರ್ವೆ ಮತ್ತು ಗಡಿ ಕಾಯಿದೆಯ ಪ್ರಕಾರ ಪರಿಣಾಮ ಸಮೀಕ್ಷೆ ನಡೆಸಲು ಮತ್ತು ಜಮೀನುಗಳನ್ನು ಸೂಕ್ತವಾಗಿ ಗುರುತಿಸಲು ಸರ್ಕಾರಕ್ಕೆ ಹಕ್ಕಿದೆ ಎಂದು ಕೇರಳ ಹೈಕೋರ್ಟ್ ಆದೇಶಿಸಿತ್ತು.

Join Whatsapp
Exit mobile version