ಕೆ.ಸುಧಾಕರ್ ಹಣಕೊಟ್ಟು ಕಾಂಗ್ರೆಸ್ ಸದಸ್ಯರನ್ನು ಖರೀದಿಸಿದ್ದಾರೆ: ಶಾಸಕ ಪ್ರದೀಪ್ ಈಶ್ವರ್

Prasthutha|

ಚಿಕ್ಕಬಳ್ಳಾಪುರ: ಇಂದು ನಡೆದ ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಗೆದ್ದುಬೀಗಿದೆ.

- Advertisement -

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ‘ ನಗರಸಭೆ ಚುನಾವಣೆಗೆ ಸಂಸದ ಕೆ.ಸುಧಾಕರ್ 7 ರಿಂದ 8 ಕೋಟಿ ರೂಪಾಯಿ ಖರ್ಚು ಮಾಡಿ ಕಾಂಗ್ರೆಸ್ ಸದಸ್ಯರನ್ನು ಖರೀದಿ ಮಾಡಿದ್ದಾರೆ ಎಂದು ಸುಧಾಕರ್ ವಿರುದ್ದ ವಾಗ್ದಾಳಿ ನಡೆಸಿದರು.

ಅವರು ಹೆಣಗಳ ಮೇಲೆ ದುಡ್ಡು ಮಾಡಿ ನಗರಸಭೆ ಚುನಾವಣೆಗೆ ಹಾಕಿದ್ದಾರೆ. ನಮ್ಮ ಬಳಿ ಹಣ ಇಲ್ಲ, ಮುಂದೆ ಕಾಂಗ್ರೆಸ್ ಬಾವುಟ ಹಾರಿಸುತ್ತೇನೆ. ಮುಂದಿನ ನಗರಸಭೆ ಚುನಾವಣೆಯಲ್ಲಿ ‘ಕೈ’ ಬಾವುಟ ಹಾರಿಸುತ್ತೇನೆ ಎಂದು ಪ್ರದೀಪ್ ಈಶ್ವರ್ ಕಿಡಿಕಾರಿದರು. ಜೊತೆಗೆ ಕೆ.ಸುಧಾಕರ್ ಅಲ್ಲ, ಅವರ ಅಪ್ಪನ ಕೈಯಲ್ಲೂ ನನ್ನ ಏನೂ ಮಾಡೋಕೆ ಆಗಲ್ಲ. ಆತ ಒಬ್ಬ ಕೋವಿಡ್ ಕಳ್ಳ. ಅವನನ್ನು ಜೈಲಿಗೆ ಹಾಕುವವರೆಗೂ ಬೀಡಲ್ಲ. ತಾಕತ್ತು, ದಮ್ಮು ಇದ್ರೆ ಬಚಾವ್ ಆಗು ನೊಡೋಣ ಎಂದು ಸವಾಲ್ ಹಾಕಿದರು.

- Advertisement -

ಶಾಸಕ ಪ್ರದೀಪ್ ಈಶ್ವರ್ ಹಾಗೂ ಸಂಸದ ಡಾ ಕೆ.ಸುಧಾಕರ್ ಮಧ್ಯೆ ಭಾರೀ ಪ್ರತಿಷ್ಠೆಗೆ ಜಿದ್ದಾಜಿದ್ದಿಗೆ ಕಾರಣವಾಗಿ, ಸಿನಿಮೀಯ ಶೈಲಿಯಲ್ಲಿ ನಡೆದ ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ಅಂತಿಮವಾಗಿ ಮುಕ್ತಯವಾಗಿದೆ. ನ್ಯಾಯಾಲಯದ ನಿದೇರ್ಶನದ ಮೇರೆಗೆ ಫಲಿತಾಂಶ ಕಾಯ್ದಿರಿಸಲಾಗಿದೆ. ಆದರೂ, ಅನಧಿಕೃತವಾಗಿ ಸಂಸದ ಸುಧಾಕರ್ ಬೆಂಬಲಿಗರು ಚುನಾವಣೆಯಲ್ಲಿ ಜಯಗಳಿಸಿದ್ದು, ವಿಜಯೋತ್ಸವ ಆಚರಣೆ ಮಾಡಿದರು.



Join Whatsapp
Exit mobile version