ರಾಜ್ಯದಲ್ಲಿ ನಾಳೆಯಿಂದಲೇ ಹೊಸ ‘ಕೋವಿಡ್ ರೂಲ್ಸ್’ ಜಾರಿ : ಆರೋಗ್ಯ ಸಚಿವ ಡಾ.ಕೆ. ಸುಧಾಕರ್

Prasthutha|

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದಲೇ ಕಠಿಣ ನಿಯಮ ಜಾರಿಗೆ ಬರುತ್ತವೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

“ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಕುರಿತು ಬಹಳ ಪ್ರಚಾರ ಆಗುತ್ತಿದೆ. ಆದರೆ ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಒಂದೇ ಪರಿಹಾರವಲ್ಲ. ಬಿಗಿಯಾದ ಕ್ರಮಗಳು ಆಗಬೇಕು. ಈ ಹಿನ್ನೆಲೆಯಲ್ಲಿ ವಿಶೇಷವಾಗಿ ಕ್ರಮ ತೆಗೆದುಕೊಳ್ಳಬೇಕಿದೆ. ಕೆಲವು ಚಟುವಟಿಕೆಗಳಿಗೆ ಕಡಿವಾಣ ಹಾಕಲೇಬೇಕಾಗುತ್ತದೆ” ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ತಿಳಿಸಿದ್ದಾರೆ.

- Advertisement -

ಕೊರೊನಾ ನಿಯಂತ್ರಣ ಸಂಬಂಧ ಇಂದು ಉನ್ನತ ಮಟ್ಟದ ಸಭೆ ನಡೆಯಲಿದ್ದು, ಕೊರೊನಾಗೆ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೂ ಕೂಡ ಆಸ್ಪತ್ರೆಯಿಂದಲೇ ವಿಡಿಯೋ ಕಾನ್ಫರನ್ಸ್ ಮೂಲಕ ಭಾಗವಹಿಸಲಿದ್ದಾರೆ. ಇಂದು ಬೆಂಗಳೂರಿನಲ್ಲಿ ಕಠಿಣ ನಿಯಮ ಜಾರಿಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

- Advertisement -