ನಾಳೆ ಬಂದ್‌ಗೆ ಅವಕಾಶವಿಲ್ಲ, ಪ್ರತಿಭಟನೆಗೆ ಅಡ್ಡಿಯಿಲ್ಲ: ಡಿಕೆ ಶಿವಕುಮಾರ್

Prasthutha|

- Advertisement -

ಬೆಂಗಳೂರು: ಪ್ರತಿಭಟನೆ ಮಾಡಲು ಯಾರಿಗೂ ನಾವು ಅಡ್ಡಿ ಮಾಡುವುದಿಲ್ಲ. ಆದರೆ ಬಂದ್ ಮಾಡಲು ಅವಕಾಶವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ಹೇಳಿದರು.

ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದರ ವಿರುದ್ಧ ವಿವಿಧ ಸಂಘಟನೆಗಳು ಶುಕ್ರವಾರ ಕರ್ನಾಟಕ ಬಂದ್​ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ನಾಳೆ ಸಾವರ್ಜನಿಕರಿಗೆ ರಕ್ಷಣೆ ಕೊಟ್ಟೇ ಕೊಡುತ್ತೇವೆ. ಸುಪ್ರೀಂ ಕೋರ್ಟ್,‌ ಹೈಕೋರ್ಟ್ ಬಂದ್ ವಿಚಾರವಾಗಿ ಒಂದಷ್ಟು ಸೂಚನೆಗಳನ್ನು ನೀಡಿವೆ,‌ ಅವನ್ನು ಪಾಲಿಸಬೇಕು. ದಯವಿಟ್ಟು ಕಾನೂನು ಪಾಲಿಸಿ, ಬಂದ್ ಮಾಡದೆ ಪ್ರತಿಭಟನೆ ಮಾಡಿ ಎಂದು ಜನರಲ್ಲಿ ಮನವಿ ಮಾಡಿದರು.

Join Whatsapp