Home ಟಾಪ್ ಸುದ್ದಿಗಳು ಕಡಬ: ಕುಸಿದು ಬಿದ್ದು ದೈವನರ್ತಕ ಮೃತ್ಯು

ಕಡಬ: ಕುಸಿದು ಬಿದ್ದು ದೈವನರ್ತಕ ಮೃತ್ಯು

ಕಡಬ: ದೈವ ನರ್ತಕರೊಬ್ಬರು ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಎಡಮಂಗಲ ಗ್ರಾಮದಲ್ಲಿ ನಡೆದಿದೆ.


ದೈವ ನರ್ತಕ ಕಾಂತು ಅಜಿಲ ಮೂಲಂಗೀರಿ ಮೃತಪಟ್ಟವರು ಎಂದು ಗುರುತಿಸಲಾಗಿದೆ.


ಕಾಂತು ಅವರು ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು.


ಎಡಮಂಗಲ ಗ್ರಾಮದ ಇಡ್ಯಡ್ಕದಲ್ಲಿ ಗ್ರಾಮಕ್ಕೆ ಸಂಬಂಧಿಸಿದ ನೇಮೊತ್ಸವ ಇಂದು ನಡೆಯುತ್ತಿತ್ತು. ಇಲ್ಲಿ ದೈವ ನರ್ತನ ಮಾಡುತ್ತಿದ್ದ ವೇಳೆ ಕಾಂತು ಅಜಿಲ ಕುಸಿದು ಬಿದ್ದರೆನ್ನಲಾಗಿದೆ. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

Join Whatsapp
Exit mobile version