ಕಡಬ: ಬಸ್ಸಿನಿಂದ ರಸ್ತೆಗೆಸೆಯಲ್ಪಟ್ಟ ವ್ಯಕ್ತಿ ಮೃತ್ಯು

Prasthutha|

- Advertisement -

ಕಡಬ: ಚಲಿಸುತ್ತಿದ್ದ ಬಸ್ಸಿನಿಂದ ರಸ್ತೆಗೆಸೆಯಲ್ಪಟ್ಟ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟ ಘಟನೆ ಭಾನುವಾರ ಸಂಜೆ ಕಡಬದಲ್ಲಿ ನಡೆದಿದೆ.

ಕುದ್ಕೋಳಿ ನಿವಾಸಿ ಅಚ್ಚುತ್ತ ಗೌಡ (63) ಮೃತರು ಎಂದು ಗುರುತಿಸಲಾಗಿದೆ .

- Advertisement -

ಮೃತರು ಭಾನುವಾರ ಸಂಜೆ ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಬಸ್ಸಿನಲ್ಲಿ ಮನೆಗೆ ಹೊರಟಿದ್ದ ವೇಳೆ ಅಂಚೆ ಕಚೇರಿಯ ಸಮೀಪದ ತಿರುವಿನಲ್ಲಿ ಆಯತಪ್ಪಿ ಅಚ್ಚುತ್ತ ಗೌಡ ಹಾಗೂ ಬಲ್ಯ ನಿವಾಸಿ ಚಂದ್ರಶೇಖರ ಎಂಬವರು ಬಸ್ಸಿನಿಂದ ರಸ್ತೆಗೆಸೆಯಲ್ಪಟ್ಟಿದ್ದಾರೆ. ಗಂಭೀರ ಗಾಯಗೊಂಡ ಅಚ್ಚುತ್ತ ಗೌಡರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಹಾದಿ ಮಧ್ಯೆ ಮೃತಪಟ್ಟಿದ್ದಾರೆ. ಚಂದ್ರಶೇಖರ ಅವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.