ಕಡಬ: ರೆಫ್ರಿಜರೇಟರ್ ಸ್ಫೋಟಗೊಂಡು ವಿದ್ಯುತ್ ಉಪಕರಣ ಸೇರಿದಂತೆ ಮನೆಯ ದಾಖಲೆ ಪತ್ರಗಳು ಸುಟ್ಟುಹೋದ ಘಟನೆ ಕಡಬದಲ್ಲಿ ನಡೆದಿದೆ.
ಕಡಬದ ಅಡ್ಡಗದ್ದೆ ಅಂಗನವಾಡಿ ಬಳಿ ಇರುವ ಫಾರೂಕ್ ಎಂಬವರ ಮನೆಯಲ್ಲಿ ಈ ಸ್ಫೋಟ ನಡೆದಿದೆ. ಘಟನೆ ಸಮಯದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ ಆದ್ದರಿಂದ ದೊಡ್ಡ ದುರಂತವೊಂದು ತಪ್ಪಿದೆ. ಮನೆಯವರು ಹೊರಟ ಒಂದು ಗಂಟೆ ಬಳಿಕ ಅವಧಿಯಲ್ಲಿ ಸ್ಫೋಟ ನಡೆದಿದೆ.
ಮದ್ಯಾಹ್ನದ ವೇಳೆ ಫಾರುಕ್ ಮತ್ತು ಅವರ ಪತ್ನಿ ಸಹಿತ ಮಕ್ಕಳು ಮನೆಯಲ್ಲಿದ್ದರು. ಬಳಿಕ ಪತ್ನಿ ಮಕ್ಕಳು ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದು ಫಾರುಕ್ ಅವರು ತಹಶಿಲ್ದಾರ್ ಕಚೇರಿ ಬಳಿ ಇರುವ ತನ್ನ ಅಂಗಡಿಗೆ ತೆರಳಿದ್ದರು.
ಮನೆಯ ಸುತ್ತ ಹೊಗೆ ಕಾಣಿಸಿಕೊಂಡಾಗ ಸ್ಥಳೀಯರು ಸಂಶಯಗೊಂಡು ನೋಡಿದಾಗ ಬೆಂಕಿ ಉರಿಯುತ್ತಿರುವುದು ಕಂಡು ಬಂದಿದೆ.
ಫಾರೂಕ್ ಐದು ವರ್ಷಗಳ ಹಿಂದೆ ಈ ರೆಫ್ರಿಜರೇಟರ್ ಖರೀದಿಸಿದ್ದರು.