ಶಾಲೆಯಲ್ಲಿ ನಮಾಝ್ ವಿಚಾರ: ಶಿಕ್ಷಣಾಧಿಕಾರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಇತ್ಯರ್ಥ

Prasthutha|

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಅಂಕತ್ತಡ್ಕ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ನಮಾಝ್ ಮಾಡಿದ ವಿಚಾರವನ್ನು ಸೌಹಾರ್ದಯುತವಾಗಿ ಪರಿಹರಿಸಲಾಗಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣಾಧಿಕಾರಿ ನೇತೃತ್ವದಲ್ಲಿ ಪೋಷಕರೊಂದಿಗೆ ಸಭೆ ನಡೆಸಲಾಯಿತು. ಸಭೆಯಲ್ಲಿ ಶಾಲೆಗಳಲ್ಲಿ ಯಾವುದೇ ಧಾರ್ಮಿಕ ಆಚರಣೆಗಳಿಗೆ ಅನುಮತಿ ನೀಡದಂತೆ ಬಿಇಓ ಸೂಚನೆ ನೀಡಿದ್ದು ಎಲ್ಲರೂ ಒಪ್ಪಿಗೆ ಸೂಚಿಸಿದ್ದಾರೆ.
ಇನ್ನು ಮುಂದೆ ಶಾಲೆಯಲ್ಲಿ ನಮ್ಮ ಮಕ್ಕಳು ನಮಾಝ್ ನಿರ್ವಹಿಸುವುದಿಲ್ಲ ಎಂದು ಸಭೆಯಲ್ಲಿ ಭಾಗವಹಿಸಿದ್ದ ಪೋಷಕರು ಒಮ್ಮತದ ನಿರ್ಧಾರ ಕೈಗೊಂಡಿದ್ದು, ಈ ಹಿನ್ನೆಲೆಯಲ್ಲಿ ಸಭೆಯಲ್ಲಿ ತೆಗೆದುಕೊಳ್ಳಲಾದ ನಿರ್ಣಯಗಳ ಕುರಿತು ಜಿಲ್ಲಾ ಶಿಕ್ಷಣ ಇಲಾಖೆಗೆ ವರದಿ ಸಲ್ಲಿಸಲಾಗಿದೆ

Join Whatsapp