ಕಡಬ | ಮಸೀದಿಯ ಕಾಂಪೌಂಡ್ ಒಳಗೆ ನುಗ್ಗಿ ಜೈಶ್ರೀರಾಂ ಘೋಷಣೆ ಕೂಗಿದ ಪ್ರಕರಣ: ಇಬ್ಬರ ಬಂಧನ

Prasthutha|

►ಕೀರ್ತನ್‌, ಸಚಿನ್‌ ಬಂಧಿತ ಆರೋಪಿಗಳು

- Advertisement -

ಕಡಬ: ರಾತ್ರಿ ವೇಳೆ ಬೈಕ್ ನಲ್ಲಿ ಆಗಮಿಸಿದ ಕಿಡಿಗೇಡಿಗಳಿಬ್ಬರು ಮಸೀದಿಯ ಕಾಂಪೌಂಡ್ ಒಳಗೆ ನುಗ್ಗಿ ಜೈಶ್ರೀರಾಂ ಘೋಷಣೆ ಕೂಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಬಿಳಿನೆಲೆ ಗ್ರಾಮದ ಸೂಡ್ಲು ನಿವಾಸಿ ಕೀರ್ತನ್‌ ಹಾಗೂ ಕೈಕಂಬ ನಡ್ತೋಟ ನಿವಾಸಿ ಸಚಿನ್‌ ಬಂಧಿತರು.

- Advertisement -

ರವಿವಾರ ರಾತ್ರಿ ಸುಮಾರು 11 ಗಂಟೆಯ ವೇಳೆಗೆ ಕಡಬ ಠಾಣಾ ವ್ಯಾಪ್ತಿಯ ಮರ್ಧಾಳ ಬದ್ರಿಯಾ ಜುಮಾ ಮಸೀದಿಯ ಕಾಂಪೌಂಡ್ ಒಳಗೆ ಬೈಕಿನಲ್ಲಿ ಬಂದ ಇಬ್ಬರು ಕಿಡಿಗೇಡಿಗಳು ಮಸೀದಿಯ ವರಾಂಡದಲ್ಲಿ ಬೈಕನ್ನು ಹಿಂತಿರುಗಿಸಿ ತೆರಳಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಜೈಶ್ರೀರಾಂ ಘೋಷಣೆ ಕೂಗಿದ್ದಾರೆ ಎನ್ನಲಾಗಿದ್ದು, ಮಸೀದಿಯಲ್ಲಿದ್ದ ಧರ್ಮಗುರುಗಳನ್ನು ಕಂಡು ತಕ್ಷಣವೇ ಹಿಂತಿರುಗಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

Join Whatsapp