ಕಡಬ: ಇಬ್ಬರನ್ನು ಬಲಿ ಪಡೆದ ಆನೆ ಕೊನೆಗೂ ಸೆರೆಯಾಗಿದೆ. ಆ ಮೂಲಕ ಕಳೆದ ಮೂರು ದಿನಗಳಿಂದ ನಡೆದ ಕಾರ್ಯಾಚರಣೆ ಕೊನೆಗೂ ಯಶಸ್ವಿಯಾಗಿದೆ.
ಫೆ.20ರ ಬೆಳಿಗ್ಗೆ ರಂಜಿತಾ (21) ಮತ್ತು ರಮೇಶ್ ರೈ (52) ಕಾಡಾನೆ ದಾಳಿಯಿಂದ ಮೃತಪಟ್ಟಿದ್ದರು. ಅಂದು ರಾತ್ರಿಯೇ ಮೈಸೂರು ದುಬಾರೆಯಿಂದ 5 ಆನೆಗಳನ್ನು ತರಲಾಗಿದ್ದು, ಫೆ.21 ರಂದು ಡ್ರೋನ್ ಕ್ಯಾಮರಾ ಬಳಸಿ ಆನೆಯನ್ನು ಪತ್ತೆ ಹಚ್ಚಲಾಗಿತ್ತು.
ಇಂದು ಕೊಂಬಾರು ಗ್ರಾಮದ ಬಾರ್ಯ ಸಮೀಪ ಕಾಡಿನಲ್ಲಿ ಆನೆ ಕಂಡುಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಮತ್ತೆ ಕಾರ್ಯಾಚರಣೆ ಮುಂದುವರಿಸಿದ್ದರು. ಕೊಂಬಾರು ಮಂಡೆಕರ ಎಂಬಲ್ಲಿ ಕಾರ್ಯಾಚರಣೆ ನಡೆಸಿ ಅರಿವಳಿಕೆ ಮದ್ದು ಶೂಟ್ ಮಾಡಿ ಕಾಡಾನೆಯನ್ನು ಸೆರೆ ಹಿಡಿದಿದ್ದಾರೆ.