ಕಡಬ: ಆತೂರಿನಲ್ಲಿ ಇತ್ತಂಡಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ವಾಗ್ವಾದ ಉಂಟಾಗಿ ಯುವಕನೊಬ್ಬನಿಗೆ ಚೂರಿ ಇರಿದು ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ನೌಫಲ್ (29) ಎಂದು ಗುರುತಿಸಲಾಗಿದೆ. ಹಲ್ಲೆಗೊಳಗಾದ ನವಾಝ್ ಎಂಬಾತ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ಆತನನ್ನು ಬಂಧಿಸಲಾಗಿದೆ.
ನವಾಝ್ ಎಂಬಾತ ಸೋಮವಾರ ಸಂಜೆ ನೌಫಲ್ ನ ಅಂಗಡಿಗೆ ಮೊಬೈಲ್ ರಿಚಾರ್ಜ್ ಮಾಡಲು ಹೋಗಿದ್ದಾಗ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.