Home ಟಾಪ್ ಸುದ್ದಿಗಳು ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಕಡೂರು ಬಿಇಒ: ಲೋಕಾಯುಕ್ತ ಬಲೆಗೆ

ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಕಡೂರು ಬಿಇಒ: ಲೋಕಾಯುಕ್ತ ಬಲೆಗೆ

ಚಿಕ್ಕಮಗಳೂರು: ಒಂದು ಶಾಲೆಯ ಶಿಕ್ಷಕನನ್ನ ಮತ್ತೊಂದು ಶಾಲೆಗೆ ನಿಯೋಜನೆ ಮಾಡಲು 15 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಜಿಲ್ಲೆಯ ಕಡೂರು ತಾಲೂಕಿನ ಬಿಇಒ ಕೆ.ಎನ್.ಜಯಣ್ಣ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.

ಕಡೂರು ತಾಲೂಕಿನ ಜಿ.ತಿಮ್ಮಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿಯೋಜನೆ ಮೇರೆಗೆ ಶಿಕ್ಷಕರಾಗಿದ್ದ ರಾಜಪ್ಪರನ್ನು, ಗರ್ಜೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವರ್ಗಾವಣೆ ಮಾಡಲು ಬಿಇಒ 15 ಸಾವಿರಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಮಂಗಳವಾರ ಮಧ್ಯಾಹ್ನ ಜಿ.ತಿಮ್ಮಾಪುರ ಗೇಟ್ ಬಳಿ ಹಣವನ್ನ ಪಡೆಯುವಾಗ ಲೋಕಾಯುಕ್ತ ಡಿ.ವೈ.ಎಸ್.ಪಿ ತಿರುಮಲೇಶ್ ಹಾಗೂ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.

ಸಂಜೆವರೆಗೂ ವಿಚಾರಣೆ ನಡೆಸಿದ ಬಳಿಕ ಲೋಕಾಯುಕ್ತ ಪೊಲೀಸರು,  ಬಿಇಒ ಜಯಣ್ಣ ಅವರನ್ನು ಚಿಕ್ಕಮಗಳೂರು ನ್ಯಾಯಾಂಗ ಬಂಧನಕ್ಕೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ದಾಳಿಯಲ್ಲಿ ವೃತ್ತ ನಿರೀಕ್ಷಕರುಗಳಾದ ಸಚ್ಚಿನ್ ಮತ್ತು ಬಿ. ಮಲ್ಲಿಕಾರ್ಜುನ್ ಹಾಗೂ ಸಿಬ್ಬಂದಿಗಳಾದ ಚೇತನ್, ಸಲೀಂ, ಲೋಕೇಶ್, ವಿಜಯಭಾಸ್ಕರ್, ಸವಿನಯ, ರವಿಚಂದ್ರ ಉಪಸ್ಥಿತರಿದ್ದರು.

Join Whatsapp
Exit mobile version