Home ಟಾಪ್ ಸುದ್ದಿಗಳು ಕಲಬುರಗಿ: ಮಾಜಿ ಸಂಸದ ಇಕ್ಬಾಲ್​ ಅಹ್ಮದ್ ಸರಡಗಿ ವಿಧಿವಶ

ಕಲಬುರಗಿ: ಮಾಜಿ ಸಂಸದ ಇಕ್ಬಾಲ್​ ಅಹ್ಮದ್ ಸರಡಗಿ ವಿಧಿವಶ

ಕಲಬುರಗಿ: ಮಾಜಿ ಸಂಸದ ಇಕ್ಬಾಲ್​ ಅಹ್ಮದ್ ಸರಡಗಿ(81) ವಿಧಿವಶರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಇಕ್ಬಾಲ್ ಅಹ್ಮದ್ ಸರಡಗಿ ಅವರು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಧ್ಯರಾತ್ರಿ 01 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ದರ್ಗಾ ಪ್ರದೇಶದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ದಿ ಎನ್.ಧರ್ಮಸಿಂಗ್ ಪರಮಾಪ್ತರಾಗಿದ್ದ ಸರಡಗಿ 1999 ಮತ್ತು 2004 ರಲ್ಲಿ 2 ಬಾರಿ ಸಂಸದ, 1 ಬಾರಿ ಎಂಎಲ್​ಸಿ ಆಗಿ ಸೇವೆ ಸಲ್ಲಿಸಿದ್ದಾರೆ. 2009 ರಲ್ಲಿ ಕಲಬುರಗಿ ಮೀಸಲು ಕ್ಷೇತ್ರವಾದ ನಂತರ ಮಲ್ಲಿಕಾರ್ಜುನ ಖರ್ಗೆಗೆ ತಮ್ಮ ಕ್ಷೇತ್ರ ಬಿಟ್ಟುಕೊಟ್ಟಿದ್ದರು. ಸಂಜೆ 6 ಗಂಟೆಗೆ ಕಲಬುರಗಿಯಲ್ಲಿ ಇಕ್ಬಾಲ್​ ಅಹ್ಮದ್ ಸರಡಗಿ ಅಂತ್ಯಕ್ರಿಯೆ ನಡೆಯಲಿದೆ.

Join Whatsapp
Exit mobile version