ಕಲಬುರಗಿ | ಜಿಲ್ಲಾ ಕೋರ್ಟ್ ಆವರಣದಲ್ಲಿ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ..!

Prasthutha|

ಕಲಬುರಗಿ: ವೈಯಕ್ತಿಕ ದ್ವೇಷದ ಹಿನ್ನೆಲೆ ವ್ಯಕ್ತಿಯೊಬ್ಬರ ಮೇಲೆ ಮೂವರು ದುಷ್ಕರ್ಮಿಗಳು ಜಿಲ್ಲಾ ಕೋರ್ಟ್ ಆವರಣದಲ್ಲೇ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

- Advertisement -


ಘಟನೆಯಲ್ಲಿ ಧೀರಜ್ ಎಂಬಾತ ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡಿದ್ದ ಧೀರಜ್ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಧೀರಜ್ ಮೇಲೆ ಪ್ರಶಾಂತ್ ಪಾಟೀಲ್ (20), ವೀರೇಶ್ ಪಾಟೀಲ್ (19), ರಾಮು ಪಾಟೀಲ್ (38) ಎಂಬ ಆರೋಪಿಗಳು ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ವೈಯಕ್ತಿಕ ದ್ವೇಷದಿಂದ ಆರೋಪಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ.



Join Whatsapp