Home ಟಾಪ್ ಸುದ್ದಿಗಳು ಕಳಸಾ ಬಂಡೂರಿ ಯೋಜನೆಗೆ ಶೀಘ್ರದಲ್ಲೇ ಚಾಲನೆ: ಸಿ ಎಂ ಬೊಮ್ಮಾಯಿ

ಕಳಸಾ ಬಂಡೂರಿ ಯೋಜನೆಗೆ ಶೀಘ್ರದಲ್ಲೇ ಚಾಲನೆ: ಸಿ ಎಂ ಬೊಮ್ಮಾಯಿ

ಬೆಳಗಾವಿ:ಕಳಸಾ ಬಂಡೂರಿ ಪರಿಷ್ಕೃತ ಸಮಗ್ರ ಯೋಜನಾ ವರದಿಗೆ ಕೇಂದ್ರ ಜಲ ಆಯೋಗ ಅನುಮೋದನೆ ನೀಡಿದ್ದು, ತಕ್ಷಣವೇ ಟೆಂಡರ್ ಪ್ರಕ್ರಿಯೆ ಆರಂಭಿಸಿ, ಕಾಮಗಾರಿ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.


ವಿಧಾನಸಭೆಯಲ್ಲಿ ಗುರುವಾರ ಮಾತನಾಡಿದ ಅವರು, ‘ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಸಿಹಿ ಸುದ್ದಿ ನೀಡಿದ್ದಾರೆ. ಕೂಡಲೇ ಕಾಮಗಾರಿ ಪ್ರಾರಂಭಿಸಲು ಕ್ರಮಕೈಗೊಳ್ಳುತ್ತೇವೆ. ನಾವೇ ಅಡಿಗಲ್ಲು ಹಾಕಿ ಈ ಭಾಗದ ಜನರಿಗೆ ಆತ್ಮವಿಶ್ವಾಸ ಮೂಡಿಸುವ ಕೆಲಸ ಮಾಡುತ್ತೇವೆ’ ಎಂದು ಹೇಳಿದರು.

Join Whatsapp
Exit mobile version