ಕಲ್ಬುರ್ಗಿ ಅಫಜಲಪುರ ತಾಲೂಕು ಆಸ್ಪತ್ರೆಯಲ್ಲಿ ಆಕ್ಸಿಜನ್ ಖಾಲಿಯಾಗಿ ನಾಲ್ವರು ರೋಗಿಗಳ ಸಾವು !

Prasthutha|

►ನಿನ್ನೆ ಚಾಮರಾಜನಗರ, ಇಂದು ಕಲ್ಬುರ್ಗಿ !

- Advertisement -

ಕಲಬುರಗಿ : ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಇಲ್ಲದೆ 24 ರೋಗಿಗಳು ಸಾವನ್ನಪ್ಪಿದ ದಾರುಣ ಘಟನೆಯ ಬೆನ್ನಲ್ಲೇ ಇಂದು ಕಲಬುರ್ಗಿಯ ಅಫಜಲಪುರ ತಾಲೂಕು ಆಸ್ಪತ್ರೆಯಲ್ಲಿ ಕೂಡ ಮತ್ತೊಂದು ಆಕ್ಸಿಜನ್ ದುರಂತ ಸಂಭವಿಸಿದೆ. ಆಸ್ಪತ್ರೆಯಲ್ಲಿನ ಆಕ್ಸಿಜನ್ ಖಾಲಿಯಾಗಿ ಇದೀಗಾಗಲೇ ನಾಲ್ವವರು ರೋಗಿಗಳು ಸಾವನ್ನಪ್ಪಿದ್ದಾರೆ.

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕು ಅಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಅಸ್ಪತ್ರೆಗೆ ದಾಖಲಾಗಿದ್ದ ನಾಲ್ವರು ರೋಗಿಗಳಿಗೆ ಮುಂಜಾನೆ 4 ಗಂಟೆ ಸುಮಾರಿಗೆ ಆಕ್ಸಿಜನ್ ಸಿಗದೇ ಮೃತಪಟ್ಟಿದ್ದಾರೆ.

- Advertisement -

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸಕಾಲದಲ್ಲಿ ಆಕ್ಸಿಜನ್ ಸಿಗದೇ 23 ರೋಗಿಗಳು ಸಾವನ್ನಪ್ಪಿದ್ದರು, ಇದೀಗ ಕಲಬುರಗಿಯಲ್ಲೂ ಸೂಕ್ತ ಸಮಯಕ್ಕೆ ಆಕ್ಸಿಜನ್ ಸಿಗದೇ ನಾಲ್ವರು ರೋಗಿಗಳು ಸಾವನ್ನಪ್ಪಿದ್ದಾರೆ.

Join Whatsapp