ಗಾಂಧಿ ವಿರುದ್ಧ ಹೇಳಿಕೆ ಸಮರ್ಥಿಸಿದ ಕಾಳಿಚರಣ್: ಮರಣದಂಡನೆಗೂ ಸಿದ್ಧ ಎಂದ ಆರೋಪಿ

Prasthutha|

ರಾಯ್ ಪುರ: ರಾಷ್ಟ್ರಪಿತ ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಛತ್ತೀಸ್ ಗಢ ಮತ್ತು ಮಹಾರಾಷ್ಟ್ರದಲ್ಲಿ ಎಫ್ ಐಆರ್ ದಾಖಲಿಸಲ್ಪಟ್ಟಿರುವ ಹಿಂದುತ್ವ ನಾಯಕ ಕಾಳಿಚರಣ್ ಮಹಾರಾಜ್ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ತಮ್ಮ ಹೇಳಿಕೆಗೆ ಯಾವುದೇ ಪಶ್ಚಾತ್ತಾಪವಿಲ್ಲ. ಇದಕ್ಕಾಗಿ ಮರಣ ದಂಡನೆ ಶಿಕ್ಷೆ ಎದುರಿಸಲೂ ಸಿದ್ಧ ಎಂದು ಹೇಳಿದ್ದಾರೆ.

- Advertisement -

ಈ ಬಗ್ಗೆ ವೀಡಿಯೋ ಮಾಡಿರುವ ಅವರು, ಗಾಂಧಿ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ನನ್ನ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಆದರೆ ಅದಕ್ಕೆ ನನಗೆ ಯಾವುದೇ ಪಶ್ಚಾತ್ತಾಪವಿಲ್ಲ ಎಂದು ಹೇಳಿದ್ದಾರೆ.

ಕಾಳಿಚರಣ್ ವಿರುದ್ದ ಪೊಲೀಸರು ತನಿಖೆ ನಡೆಸುತ್ತಿದ್ದು, ಅವರನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

- Advertisement -

ಧರ್ಮ ಸಂಸದ್ ಸಭೆಯ ತನ್ನ ಭಾಷಣದಲ್ಲಿ ಕಾಳಿಚರಣ್, ಗಾಂಧಿಯನ್ನು ಅವಹೇಳನ ಮಾಡಿ ಅವರನ್ನು ಹತ್ಯೆ ಮಾಡಿದ ನಾಥೂರಾಂ ಗೋಡ್ಸೆಯನ್ನು ಶ್ಲಾಘಿಸಿದ್ದಾರೆ. ಇದು ವಿವಾದವಾಗುತ್ತಿದ್ದಂತೆ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು.



Join Whatsapp