ಕಲ್ಲಡ್ಕ| ಆಟೋ ಚಾಲಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

Prasthutha|

ಬಂಟ್ವಾಳ : ಆಟೋ ಚಾಲಕನೊಬ್ಬನ ಮೇಲೆ ನಾಲ್ವರ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಬೋಳಂತೂರು ಸಮೀಪದ ನಾಡಾಜೆ ಎಂಬಲ್ಲಿ ನಡೆದಿದೆ.

- Advertisement -

ಬೋಳಂತೂರು ಸಮೀಪದ ಗುಳಿ ನಿವಾಸಿ ಶಾಕೀರ್(30) ಹಲ್ಲೆಗೊಳಗಾದ ವ್ಯಕ್ತಿ. ಕಬಡ್ಡಿ ಮ್ಯಾಚ್ ಮುಗಿಸಿ ತಡರಾತ್ರಿ ಮನೆಗೆ ಹಿಂತಿರುಗುತ್ತಿದ್ದ ವೇಳೆಬೋಳಂತೂರು ಸಮೀಪದ ನಾಡಾಜೆ ರಸ್ತೆಯಲ್ಲಿ ತಡೆದ ನಾಲ್ವರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ ಎಂದು ಗಾಯಾಳು ಶಾಕಿರ್ ತಿಳಿಸಿದ್ದಾರೆ.

ಹಲ್ಲೆಗೊಳಗಾದ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Join Whatsapp