ಉಳ್ಳಾಲ ‘ಪಾಕ್’ ಹೇಳಿಕೆ | ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ, ಬಂಧಿಸಲು SDPI ಆಗ್ರಹ

Prasthutha|

ಮಂಗಳೂರು : ಉಳ್ಳಾಲವನ್ನು ಪಾಕಿಸ್ತಾನಕ್ಕೆ ಹೋಲಿಸಿದ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕು ಎಂದು ಎಸ್ ಡಿಪಿಐ ಒತ್ತಾಯಿಸಿದೆ. ಈ ಕುರಿತು ಪತ್ರಿಕಾ ಪ್ರಕಟನೆ ಬಿಡುಗಡೆಗೊಳಿಸಿರುವ ಎಸ್ ಡಿಪಿಐ ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ, ದೇಶದ್ರೋಹದ ಮಾತುಗಳನ್ನಾಡಿದ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

- Advertisement -

ಕಿನ್ಯಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಟ್ ಉಳ್ಳಾಲವನ್ನು ಭಾರತದ ಶತ್ರುದೇಶ ಪಾಕಿಸ್ತಾನಕ್ಕೆ ಹೋಲಿಸಿ ದೇಶದ್ರೋಹದ ಮಾತುಗಳನ್ನಾಡಿದ್ದಾರೆ. ಭಟ್ ಅವರ ಹೇಳಿಕೆಯನ್ನು ಎಸ್ ಡಿಪಿಐ ದ.ಕ. ಜಿಲ್ಲಾ ಘಟಕ ತೀವ್ರವಾಗಿ ಖಂಡಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ರಾಣಿ ಅಬ್ಬಕ್ಕಳ ಊರು ಮತ್ತು ಎಲ್ಲಾ ಧರ್ಮದವರು ಜಾತಿ ಮತ ಭೇದವಿಲ್ಲದೆ ಪರಸ್ಪರ ಗೌರವಿಸಿ ಭೇಟಿ ನೀಡುವ ಧಾರ್ಮಿಕ ಕ್ಷೇತ್ರಗಳಿರುವ ಉಳ್ಳಾಲವನ್ನು ಪಾಕಿಸ್ತಾನಕ್ಕೆ ಹೋಲಿಸಲಾಗಿದೆ. ಪರಸ್ಪರ ಅನ್ಯೋನ್ಯತೆಯಿಂದಿರುವ ಜನರ ನಡುವೆ ಧ್ರುವೀಕರಣ ಮಾಡಿ, ಸಮಾಜದಲ್ಲಿ ಅಶಾಂತಿಯನ್ನು ಸೃಷ್ಟಿಸಿ ಕೋಮು ಗಲಭೆಗೆ ಯತ್ನಿಸುವ ಹುನ್ನಾರದಂತಿತ್ತು ಭಟ್ ಅವರ ಮಾತುಗಳು ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

- Advertisement -

Join Whatsapp