ಕಲ್ಲಡ್ಕ: ಮರದಿಂದ ಬಿದ್ದು ಯುವಕ ಮೃತ್ಯು

Prasthutha|

ಬಂಟ್ವಾಳ: ಮರದಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.

- Advertisement -


ಕೋಡೆಪದವು ನಿವಾಸಿ ಸುಲೈಮಾನ್ ಎಂಬವರ ಪ್ರಥಮ ಪುತ್ರ, ಅಮ್ಟೂರ್ ಶರೀಫ್ (32) ಮೃತ ಯುವಕ. ಶರೀಫ್ ಅವರು ಮರದ ಕೆಲಸ ಮಾಡುತ್ತಿದ್ದು, ನಿನ್ನೆ ಬೆಳಗ್ಗೆ ಮರ ಕಡಿಯುತ್ತಿದ್ದಾಗ ಮರದಿಂದ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಮಂಗಳೂರಿನ ಯೂನಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ ಮೃತಪಟ್ಟಿದ್ದಾರೆ.


ಶರೀಫ್ ಅವರು ತಂದೆ, ತಾಯಿ, ಸಹೋದರರು, ಪತ್ನಿ ಹಾಗೂ 8 ತಿಂಗಳ ಮಗು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಸಾಮಾಜಿಕ ಕಾರ್ಯಕರ್ತರೂ ಆಗಿದ್ದ ಶರೀಫ್ ಅವರು ಪರೋಪಕಾರಿ ವ್ಯಕ್ತಿತ್ವವನ್ನು ಹೊಂದಿದ್ದರು. ಅಮ್ಟೂರ್ ಗ್ರಾಮದಲ್ಲಿ ಶರೀಫ್ ಅವರು ಚಿರಪರಿಚಿತರಾಗಿದ್ದರು. ಜಾತಿ ಮತ ಭೇದವಿಲ್ಲದೆ ಎಲ್ಲರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಿದ್ದ ಅವರ ನಿಧನಕ್ಕೆ ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.

- Advertisement -


ಕೋಡಪದವು ಜುಮಾ ಮಸೀದಿಯ ಖಬರಸ್ತಾನದಲ್ಲಿ ಸೋಮವಾರ ಸಂಜೆ 6 ಗಂಟೆಗೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Join Whatsapp