ಕಲ್ಲಾಪು: ಗ್ಲೋಬಲ್ ಮಾರುಕಟ್ಟೆ ಗೆ ಬೆಂಕಿ, ಅಪಾರ ನಷ್ಟ

Prasthutha|

ಉಳ್ಳಾಲ: ಕಲ್ಲಾಪು ಗ್ಲೋಬಲ್ ಮಾರುಕಟ್ಟೆ ಗೆ ಬೆಂಕಿ ಹಿಡಿದ ಪರಿಣಾಮ ಕೆಲವು ಅಂಗಡಿಗಳ ಸಾಮಗ್ರಿಗಳು ಬೆಂಕಿಗಾಹುತಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.

- Advertisement -

ಬೆಂಕಿ ಅವಘಡ ಸಂಭವಿಸಿ 5 ದೊಡ್ಡ ಹಾಗೂ 20 ಸಣ್ಣ ಅಂಗಡಿಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿ , ವ್ಯಾಪಾರಸ್ಥರಿಗೆ ಕೋಟ್ಯಂತರ ರೂ ನಷ್ಟ ಉಂಟಾಗಿದೆ. ಬೀಗ ಹಾಕಿದ್ದ ಅಂಗಡಿಗಳ ಒಳಗಿನಿಂದ ಬೆಂಕಿ ಕಾಣಿಸಿಕೊಂಡಿದ್ದು ಒಮ್ಮಿಂದೊಮ್ಮೆಲೇ 25 ಅಂಗಡಿಗಳಿಗೇ ವ್ಯಾಪಿಸಿದೆ. ಮಂಗಳೂರಿನಿಂದ ಅಗ್ನಿಶಾಮಕ ದಳದವರು ಸ್ಥಳಕ್ಕಾಗಮಿಸಿ ಕಾರ್ಯಾಚರಣೆ ಕೈಗೊಂಡ ಹಿನ್ನೆಲೆಯಲ್ಲಿ ದುರದೃಷ್ಟವಶಾತ್ ಉಳಿದ 60 ಅಂಗಡಿಗಳಿಗೆ ಬೆಂಕಿತಗುಲಲಿಲ್ಲ ಎಂದು ತಿಳಿದು ಬಂದಿದೆ.

Join Whatsapp