ಮಂಗಳೂರು: ಉಳ್ಳಾಲವನ್ನು ಬೆಚ್ಚಿಬೀಳಿಸಿದ್ದ ಟಾರ್ಗೆಟ್ ಗ್ರೂಪಿನ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿ ಕಡಪ್ಪರ ಸಮೀರ್ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಯುಧಗಳಿಂದ ದಾಳಿ ನಡೆಸಿದ ಘಟನೆ ಕಲ್ಲಾಪು ಬಳಿ ಭಾನುವಾರ ರಾತ್ರಿ ನಡೆದಿದೆ.
ತನ್ನ ತಾಯಿಯೊಂದಿಗೆ ಕಲ್ಲಾಪು ರೆಸ್ಟೋರೆಂಟ್ ಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದಿದ್ದ ಐದಾರು ಮಂದಿ ಇದ್ದ ತಂಡ ಹತ್ಯೆಗೈದು ಪರಾರಿಯಾಗಿದೆ.
ಶಮೀರ್ ಕಾರಿನಲ್ಲಿ ತಾಯಿ ಮತ್ತು ಕುಟುಂಬದ ಸದಸ್ಯರೊಂದಿಗೆ ಕಲ್ಲಾಪುವಿನ ಫಾಸ್ಟ್‌ಫುಡ್ ಬಂದ ಸಂದರ್ಭ ಹಿಂಬದಿಯಿಂದ ಕಾರಿನಲ್ಲಿ ಹಿಂಬಾಲಿಸಿದ್ದ ತಂಡ ಶಮೀರ್ ಇಳಿಯುತ್ತಿದ್ದಂತೆ ತಲವಾರಿನಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದೆ. ಅಪಾಯವನ್ನು ಅರಿತ ಶಮೀರ್ ತಕ್ಷಣ ಸ್ಥಳದಿಂದ ಓಡಲು ಯತ್ನಿಸಿದ್ದಾನೆ. ಈ ವೇಳೆ ಅಟ್ಟಾಡಿಸಿದ ಐದು ಮಂದಿಯ ತಂಡ ಕಲ್ಲಾಪು ಜಂಕ್ಷನ್ ನಿಂದ ಸುಮಾರು 500 ಮೀ ದೂರದಲ್ಲಿರುವ ವಿ.ಕೆ.ಫರ್ನಿಚರ್ ಹಿಂಭಾಗದಲ್ಲಿ ತಲವಾರಿನಿಂದ ಕಡಿದು ಹತ್ಯೆ ನಡೆಸಿದೆ.
ಘಟನೆಯ ಸಂದರ್ಭದಲ್ಲಿ ಸ್ಥಳೀಯರು ಪೊಲೀಸರ ಜೊತೆಗೆ ಹುಡುಕಾಡಿದ್ದು ಶಮೀರ್ ಮತ್ತು ಆತನನ್ನು ಅಟ್ಟಾಡಿಸಿಕೊಂಡು ಹೋದ ತಂಡವೂ ಪತ್ತೆಯಾಗಿರಲಿಲ್ಲ. ಇಬ್ಬರೂ ತಪ್ಪಿಸಿಕೊಂಡು ಹೋಗಿದ್ದರು ಎಂದು ಪೊಲೀಸರು ಹುಡುಕಾಟ ನಡೆಸಿ ತೆರಳಿದ್ದರು. ಈ ಸಂದರ್ಭದಲ್ಲಿ ಕೊಲೆಯಾದ ಶಮೀರ್ ಓಡಿದ ಸ್ಥಳದಲ್ಲಿ ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ. ಸ್ಥಳದಲ್ಲಿ ಜನರು ಜಮಾಯಿಸಿದ್ದು ಪೊಲೀಸರು ಜನರನ್ನು ನಿಯಂತ್ರಿಸಲು ಹರಸಾಹಸ ಪಟ್ಟರು.
ಇಲ್ಯಾಸ್ ಕೊಲೆ ಆರೋಪಿ
2018 ರಲ್ಲಿ ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ನನ್ನು ಜೆಪ್ಪುವಿನ ಫ್ಲಾಟ್‌ವೊಂದರಲ್ಲಿ ದಾವುದ್, ಶಮೀರ್, ರಿಯಾಝ್, ಶಮೀರ್ ಕಡಪ್ಪರ, ಅಬ್ದುಲ್ ಖಾದರ್, ಉಮ್ಮರ್ ನವಾಫ್, ಮೊಹಮ್ಮದ್ ನಝೀರ್, ನೌಷಾದ್, ಅಝರ್ ಆಲಿ ಎಂಬವರು ಸೇರಿಕೊಂಡು ಹತ್ಯೆ ನಡೆಸಿದ್ದರು. ಪ್ರಕರಣದಲ್ಲಿ ಶಮೀರ್ ಎರಡನೇ ಆರೋಪಿಯಾಗಿದ್ದು, ದಾವುದ್ ಮತ್ತು ಶಮೀರ್ ಇಬ್ಬರು ನೇರವಾಗಿ ಫ್ಲ್ಯಾಟ್ ಪ್ರವೇಶಿಸಿ ಇಲ್ಯಾಸ್ ನನ್ನು ಹತ್ಯೆ ನಡೆಸಿರುವುದು ತನಿಖೆಯಲ್ಲಿ ಬಯಲಾಗಿತ್ತು. ಪ್ರಕರಣ ಸಂಬಂಧ ಜೈಲುಪಾಲಾಗಿದ್ದ.