ಲೋಕಸಭೆಗೆ ಎಂಟು ಕ್ಷೇತ್ರಗಳಲ್ಲಿ ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಸ್ಪರ್ಧೆ

Prasthutha|

ಕೊಪ್ಪಳ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ರಾಜ್ಯದ ಎಂಟು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ತಿಳಿಸಿದೆ.

- Advertisement -

ಕೊಪ್ಪಳ, ಚಿತ್ರದುರ್ಗ, ಬಳ್ಳಾರಿ, ರಾಯಚೂರು, ಬೀದರ್, ಬಾಗಲಕೋಟೆ, ಚಿಕ್ಕಬಳ್ಳಾಪುರ ಹಾಗೂ ವಿಜಯಪುರ ಕ್ಷೇತ್ರಗಳಲ್ಲಿ‌ ನಮ್ಮ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಮನೋಹರಗೌಡ ಹೇರೂರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಫೆಬ್ರುವರಿ 4ರಂದು ಕೊಪ್ಪಳದಲ್ಲಿ ಪಕ್ಷದ ಎಲ್ಲ ತಾಲ್ಲೂಕು ಘಟಕಗಳ ಪ್ರಮುಖರ ಸಮಾವೇಶ ನಡೆಯಲಿದೆ. ಅಂದು ಅಭ್ಯರ್ಥಿಗಳನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರೂ‌ ಆದ ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿ ಘೋಷಿಸಲಿದ್ದಾರೆ ಎಂದು ಅವರು ಮಾಹಿತಿ‌ ನೀಡಿದ್ದಾರೆ.

- Advertisement -

ಕರ್ನಾಟಕದ ಮಾಜಿ ಸಚಿವ ಮತ್ತು ಗಣಿ ಉದ್ಯಮಿ ಜಿ ಜನಾರ್ದನ ರೆಡ್ಡಿ ಅವರ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಕಳೆದ ವಿಧಾನಸಭಾ ಚುನಾವಣೆಯಲ್ಲಿ 41 ಅಭ್ಯರ್ಥಿಗಳು ಸ್ಪರ್ಧಿಸಿ ಒಂದು ಕ್ಷೇತ್ರದಲ್ಲಿ ಪಕ್ಷ ಗೆಲುವು ಸಾಧಿಸಿತ್ತು.

Join Whatsapp