Home ಟಾಪ್ ಸುದ್ದಿಗಳು ಡಿಎಂಕೆ ಮೈತ್ರಿಕೂಟಕ್ಕೆ ಸೇರ್ಪಡೆಯಾದ ಕಮಲ್ ಹಾಸನ್ ನೇತೃತ್ವದ ‘ಮಕ್ಕಳ್ ನೀಧಿ ಮೈಯಂ’

ಡಿಎಂಕೆ ಮೈತ್ರಿಕೂಟಕ್ಕೆ ಸೇರ್ಪಡೆಯಾದ ಕಮಲ್ ಹಾಸನ್ ನೇತೃತ್ವದ ‘ಮಕ್ಕಳ್ ನೀಧಿ ಮೈಯಂ’

ಚೆನ್ನೈ: ಮುಂಬರುವ ಲೋಕಸಭೆ ಚುನಾವಣೆಗೆ ನಟ ಕಮಲ್ ಹಾಸನ್ ನೇತೃತ್ವದ ಮಕ್ಕಳ್ ನೀಧಿ ಮೈಯಂ (ಎಂಎನ್ಎಂ) ಪಕ್ಷವು ಇಂದು (ಶನಿವಾರ) ಡಿಎಂಕೆ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟಕ್ಕೆ (ಎಸ್ಪಿಎ) ಸೇರ್ಪಡೆಯಾಗಿದೆ.


ಮೈತ್ರಿ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕಮಲ್ ಹಾಸನ್, ‘ದೇಶದ ಹಿತದೃಷ್ಟಿಯಿಂದ ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಸೇರ್ಪಡೆಯಾಗಿದ್ದೇನೆಯೇ ಹೊರತು ಯಾವುದೇ ಹುದ್ದೆಯನ್ನು ಬಯಸಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.


ಲೋಕಸಭೆ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಲು ಕಾಂಗ್ರೆಸ್ ಸಮಿತಿಯು ಶೀಘ್ರದಲ್ಲೇ ಡಿಎಂಕೆ ನಾಯಕರನ್ನು ಭೇಟಿಯಾಗಲಿದೆ ಎಂದು ತಿಳಿದುಬಂದಿದೆ

Join Whatsapp
Exit mobile version