‘ದಿ ಕೇರಳ ಸ್ಟೋರಿ’ ಒಂದು ಪ್ರೊಪೊಗಾಂಡ ಸಿನಿಮಾ, ಅದರಲ್ಲಿ ಸತ್ಯ ಇಲ್ಲ: ಕಮಲ್ ಹಾಸನ್

Prasthutha|

ಅಬುಧಾಬಿ: ದೇಶದಾದ್ಯಂತ ವಿವಾದವನ್ನು ಸೃಷ್ಠಿಸಿರುವ ಕಪೋಲಕಲ್ಪಿತ ಸಿನಿಮಾ ಬಗ್ಗೆ ನಟ ಕಮಲ್ ಹಾಸನ್ ಪ್ರತಿಕ್ರಿಯಿಸಿದ್ದು, ಇದೊಂದು ಪ್ರೊಪೊಗಾಂಡ ಸಿನಿಮಾ, ಈ ಸಿನಿಮಾದಲ್ಲಿ ಸತ್ಯ ಇಲ್ಲ ಎಂದು ಹೇಳಿದ್ದಾರೆ.

- Advertisement -

ಅಬುಧಾಬಿಯಲ್ಲಿ ನಡೆಯುತ್ತಿರುವ ‘ಐಫಾ ಅವಾರ್ಡ್ಸ್’ ಕಾರ್ಯಕ್ರಮದಲ್ಲಿ ಕಮಲ್ ಹಾಸನ್ ಅವರು ಭಾಗಿ ಆಗಿದ್ದಾರೆ. ಈ ವೇಳೆ ಅವರಿಗೆ ‘ದಿ ಕೇರಳ ಸ್ಟೋರಿ ’ ಸಿನಿಮಾ ಬಗ್ಗೆ ಪ್ರಶ್ನೆ ಕೇಳಲಾಗಿದೆ. ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು ಈ ಚಿತ್ರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

 ‘ನಾನು ಆಗಲೇ ಹೇಳಿದ್ದೇನೆ. ಇದು ಪ್ರೊಪೊಗಾಂಡ ಸಿನಿಮಾ. ನಾನು ಅದರ ವಿರುದ್ಧವಾಗಿದ್ದೇನೆ. ಸಿನಿಮಾ ಶೀರ್ಷಿಕೆಯ ಕೆಳಗಡೆ ‘ಸತ್ಯ ಘಟನೆ’ ಅಂತ ಬರೆದರೆ ಸಾಕಾಗುವುದಿಲ್ಲ. ಅದು ನಿಜಕ್ಕೂ ಸತ್ಯ ಘಟನೆಯೇ ಆಗಿರಬೇಕು. ಆದರೆ ಈ ಚಿತ್ರದಲ್ಲಿನ ವಿಷಯ ನಿಜವಲ್ಲ’ ಎಂದು ಕಮಲ್ ಹಾಸನ್ ಹೇಳಿದ್ದಾರೆ.

- Advertisement -

 ‘ದಿ ಕೇರಳ ಸ್ಟೋರಿ’  ಸಿನಿಮಾದಲ್ಲಿ ತೋರಿಸಿದ ಅಂಶಗಳು ಸಂಪೂರ್ಣ ಸುಳ್ಳು ಎಂದು ಹಲವರು ವಾದಿಸುತ್ತಿದ್ದಾರೆ. ರಾಜಕೀಯದ ಉದ್ದೇಶದಿಂದ ಈ ಸಿನಿಮಾ ಮಾಡಲಾಗಿದ್ದು, ಭಾರತದಲ್ಲಿನ ಮುಸ್ಲಿಮರ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡಿಸುವ ಸಲುವಾಗಿ ಈ ಸಿನಿಮಾ ನಿರ್ಮಾಣ ಆಗಿದೆ ಅಂತ ಹಲವರು ಅಭಿಪ್ರಾಯ ಪಟ್ಟಿದ್ದಾರೆ.

 ‘ಸಿನಿಮಾ ಯಾವಾಗಲೂ ಜನರಲ್ಲಿ ಸಾಮಾಜಿಕ ಸೌಹಾರ್ದತೆ ಮತ್ತು ಪ್ರೀತಿಯನ್ನು ಬೆಳೆಸಬೇಕು. ಅದನ್ನು ಪ್ರಚಾರ ಮಾಡುವುದು ನಮ್ಮ ಜವಾಬ್ದಾರಿ. ಒಂದು ಚಿತ್ರಕ್ಕೆ ಸಾಮಾಜಿಕ ಸಾಮರಸ್ಯವನ್ನು ಒಡೆಯುವ ಶಕ್ತಿ ಇದ್ದರೆ ಅದು ತಪ್ಪು. ನಾವು ಜಗತ್ತನ್ನು ಒಂದುಗೂಡಿಸಬೇಕೇ ಹೊರತು ವಿಭಜಿಸಬಾರದು’ ಎಂದು ನಟ ನವಾಜುದ್ದೀನ್ ಸಿದ್ದಿಕಿ ಹೇಳಿದ್ದರು.

Join Whatsapp