Home ಟಾಪ್ ಸುದ್ದಿಗಳು ‘ಕಮಲ–ದಳ’ ಜೋಡಿಯ ಮೈಸೂರು ಚಲೋಗೆ ಚಾಲನೆ

‘ಕಮಲ–ದಳ’ ಜೋಡಿಯ ಮೈಸೂರು ಚಲೋಗೆ ಚಾಲನೆ

ಬೆಂಗಳೂರು: ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಬಿಜೆಪಿ–ಜೆಡಿಎಸ್ ನಾಯಕರು, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ‘ಮೈಸೂರು ಚಲೋ’ ಪಾದಯಾತ್ರೆ ಶನಿವಾರ ಚಾಲನೆ ನೀಡಲಾಗಿದೆ.

ಬೆಂಗಳೂರಿನ ಕೆಂಗೇರಿ ಬಳಿ ಕೆಂಪಮ್ಮ ದೇವಸ್ಥಾನದ ಬಳಿ ನಗಾರಿ ಬಾರಿಸುವ ಮೂಲಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಮಾಜಿ ಸಿಎಂ, ಕೇಂದ್ರ ಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರು ಪಾದಯಾತ್ರೆಗೆ ಚಾಲನೆ ನೀಡಿದರು.


ಇಂದಿನಿಂದ ಆಗಸ್ಟ್ 10 ರವರೆಗೆ ಏಳು ದಿನಗಳ ಕಾಲ ಒಟ್ಟು 124 ಕಿಮೀವರೆಗೆ ಪಾದಯಾತ್ರೆ ನಡೆದು ಮುಡಾ ಕಚೇರಿಯಲ್ಲಿ ಕೊನೆಯಾಗಲಿದೆ. ಕೊನೆಯ ದಿನದಂದು ಮೈಸೂರಿನಲ್ಲಿ ನಡೆಯುವ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಥವಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಹಲವು ನಾಯಕರು ಭಾಗಿಯಾಗುವ ಸಾಧ್ಯತೆಯಿದೆ.

Join Whatsapp
Exit mobile version