ಅಧ್ಯಕ್ಷೀಯ ಸ್ಪರ್ಧೆಯಿಂದ ಹೊರ ನಡೆದ ಜೋ ಬೈಡನ್: ಅಭ್ಯರ್ಥಿಯಾಗಿ ಕಮಲಾ ಹ್ಯಾರಿಸ್ ಆಯ್ಕೆ

Prasthutha|

ವಾಷಿಂಗ್ಟನ್: ಅಮೆರಿಕದ ಹಾಲಿ ಅಧ್ಯಕ್ಷ ಜೋ ಬೈಡನ್, ಮುಂಬರುವ ಅಧ್ಯಕ್ಷೀಯ ಚುನಾವಣೆಯ ಸ್ಪರ್ಧೆಯಿಂದ ಹಿಂದೆ ಸರಿಯುವ ಘೋಷಣೆ ಮಾಡಿದ್ದಾರೆ. ಹೀಗಾಗಿ ಹಾಲಿ ಉಪಾಧ್ಯಕ್ಷೆ, ಭಾರತೀಯ ಮೂಲದ ಕಮಲಾ ಹ್ಯಾರಿಸ್ ಡೆಮಾಕ್ರೆಟ್ ಪಕ್ಷದ ಅಭ್ಯರ್ಥಿಯಾಗಿದ್ದಾರೆ.

- Advertisement -

ಈ ಕುರಿತು ಭಾನುವಾರ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಬೈಡನ್, ‘ಅಮೆರಿಕದ ಅಧ್ಯಕ್ಷನಾಗಿ ಸೇವೆ ಸಲ್ಲಿಸುವ ಅವಕಾಶ ಪಡೆದಿದ್ದು ನನ್ನ ಜೀವನದ ಅತಿದೊಡ್ಡ ಗೌರವ. ಇದೇ ಹುದ್ದೆಗೆ ಮತ್ತು ಆಯ್ಕೆ ನನ್ನ ಉದ್ದೇಶವಾಗಿತ್ತಾದರೂ ದೇಶದ ಹಿತದೃಷ್ಟಿಯಿಂದ ಚುನಾವಣಾ ಕಣದಿಂದ ಹಿಂದೆ ಸರಿಯುವ ನಿರ್ಧಾರ ಮಾಡಿದ್ದೇನೆ ಮತ್ತು ನನ್ನ ಗುರಿಯನ್ನು ಕರ್ತವ್ಯ ಅಧ್ಯಕ್ಷೀಯ ಪೂರ್ಣಗೊಳಿಸಲು ಬಳಸಲು ನಿರ್ಧರಿಸಿದ್ದೇನೆ’ ಎಂದು ಹೇಳಿದ್ದಾರೆ.

ನ.5ರಂದು ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಬೈಡೆನ್ ಬದಲಾಗಿ ಡೆಮಾಕ್ರೆಟ್ ಪಕ್ಷದ ಅಭ್ಯರ್ಥಿಯಾಗಿ ಕಮಲಾ ಹ್ಯಾರಿಸ್ ಆಯ್ಕೆಯಾಗಿದ್ದಾರೆ. ಈ ಮೂಲಕ ಅಧ್ಯಕ್ಷ ಹುದ್ದೆಗೆ ಸ್ಪರ್ಧ ಸಿದ ಎರಡನೇ ಮಹಿಳೆ ಎನ್ನಿಸಿಕೊಳ್ಳಲಿದ್ದಾರೆ. ಒಂದು ವೇಳೆ ಚುನಾವಣೆಯಲ್ಲಿ ಆಯ್ಕೆಯಾದರೆ ಮೊದಲ ಮಹಿಳೆ ಮತ್ತು ಅಮೆರಿಕದ ಅಧ್ಯಕ್ಷೆಯಾದ ಭಾರತ ಮೂಲದ ಮಹಿಳೆ ಎಂಬ ಗೌರವ ಒಲಿಯಲಿದೆ.



Join Whatsapp